ಬೆಂಗಳೂರು : ಸಮ್ಮಿಶ್ರ ಸರಕಾರ ವಿರುದ್ಧ ರೆಬೆಲ್ ಆಗಿದ್ದ ಶಾಸಕರಲ್ಲಿ ಬಿಟಿಎಂ ಕ್ಷೇತ್ರದ ಶಾಸಕ ರಾಮಲಿಂಗಾ ರೆಡ್ಡಿ ತಮ್ಮ ರಾಜೀನಾಮೆಯನ್ನು ವಾಪಾಸ್ ಪಡೆಯುವುದಾಗಿ ತಿಳಿಸಿದ್ದಾರೆ.
ಪಕ್ಷದಲ್ಲಿ ಹೆಚ್ಚುತ್ತಿರುವ ಒತ್ತಡದ ಹಿನ್ನೆಲೆಯಲ್ಲಿ ನಾಳೆ ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಹಿಂಪಡೆಯುವುದಾಗಿ ಶಾಸಕ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕಾಂಗ್ರೆಸ್ ನ ಹಿರಿಯನಾಯಕರು ಕೂಡ ರಾಜೀನಾಮೆ ವಾಪಾಸ್ ಪಡೆಯುವಂತೆ ಕೋರಿದ್ದಾರೆ ಹಾಗಾಗಿ ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯಲು ತೀರ್ಮಾನಿಸಿದ್ದೇನೆ.
ಕಳೆದ 45 ವರ್ಷದ ಸುಧೀರ್ಘ ರಾಜಕೀಯ ಜೀವನದಲ್ಲಿ ನಿಷ್ಟಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿ, 7 ಬಾರಿ ಶಾಸಕನಾಗಿ ಪಕ್ಷದ ಶ್ರೇಯೋಭಿವೃದ್ದಿಗಾಗಿ ಹಾಗೂ ನನ್ನ ಮತಕ್ಷೇತ್ರದ ಅಭಿವೃದ್ಧಿಗಾಗಿ ಮತ್ತು ಸಚಿವನಾಗಿದ್ದಂತಹ ಸಂದರ್ಭದಲ್ಲಿ ರಾಜ್ಯಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ, ಕಾಂಗ್ರೆಸ್‍ನ ಹಲವಾರು ವಿದ್ಯಾಮಾನಗಳಿಂದ ಶಾಸಕ ಸ್ಥಾನಕ್ಕೆ ಮಾತ್ರ ನನ್ನ ರಾಜೀನಾಮೆ ಹೊರತು ಪಕ್ಷಕ್ಕಲ್ಲ ಎಂದು ಪಕ್ಷದ ಹೈ ಕಮಾಂಡ್ ಹಾಗೂ ಕಾರ್ಯಕರ್ತರಿಗೆ ಮನವಿ ರೂಪದಲ್ಲಿ ತಿಳಿಸಿದ್ದಾರೆ.