Advertisement

ಜನರ ನಡುವೆ ಹೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ: ಡಿ ಕೆ ಶಿವಕುಮಾರ್

03:20 PM Jan 18, 2021 | Team Udayavani |

ಕಲಬುರಗಿ: ಈ ವರ್ಷ ಹೋರಾಟದ ವರ್ಷವೆಂದು ಪಕ್ಷ ಘೋಷಿಸಿದ್ದು, ಜನರ ನಡುವೆ ನಿಂತು ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ಪ್ರದೇಶ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದರು.

Advertisement

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಜನ ವಿರೋಧಿ ನೀತಿಗಳನ್ನು ಅನುಸರಿಸಿ ಜನರ ಆಶೋತ್ತರಗಳನ್ನು ಗಾಳಿಗೆ ತೂರಲಾಗುತ್ತಿದೆ. ಹೀಗಾಗಿ ಎರಡೂ ಸರ್ಕಾರಗಳನ್ನು ಕಿತ್ತೊಗೆಯಲು ಜನರು ನಡುವೆ ಹೋಗಿ ಕಾಂಗ್ರೆಸ್ ಪಕ್ಷ ನಿರಂತರ ಹೋರಾಟ ಮಾಡಲಾಗುವುದು. ಇದಕ್ಕಾಗಿ ರೂಪು ರೇಷೆ ಹಾಕಿಕೊಳ್ಳಲಾಗಿದೆ ಎಂದರು.

ಅತಿವೃಷ್ಟಿ ಹಾನಿಗೆ ಪರಿಹಾರ ಪರಿಹಾರ ಬಂದಿಲ್ಲ. ಕಲ್ಯಾಣ ಕರ್ನಾಟಕದಲ್ಲಿನ ತೊಗರಿ ರೈತರಿಗೆ ಪ್ರೋತ್ಸಾಹ ಧನ ನೀಡದಿರುವುದು, ಜನರ ಭಾವನೆ ಮರೆತು ಸ್ವಹಿತಾಸಕ್ತಿಯಲ್ಲಿ ತೊಡಗಿರುವ ಸರ್ಕಾರದ ಧೋರಣೆಗಳನ್ನು ಜನರಿಗೆ ಮುಟ್ಟಿಸಿ ಎರಡೂ ಸರ್ಕಾರಗಳನ್ನು ಕಿತ್ತೊಗೆಯಲು ಪಕ್ಷ ಸಂಕಲ್ಪ ತೊಟ್ಟಿದೆ ಎಂದರು.

ಇದನ್ನೂ ಓದಿ:ಅಧಿಕಾರಿಗೆ ಸಡ್ಡು; ನಂದಿಗ್ರಾಮ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧೆ: ಮಮತಾ ಬ್ಯಾನರ್ಜಿ ಸವಾಲು

ಕೆಪಿಸಿಸಿ ರಾಜ್ಯದ 150 ಕ್ಷೇತ್ರಗಳಿಗೆ ಭೇಟಿ ನೀಡಿ ಪಕ್ಷದ ಸಂಘಟನೆಯ ಕುರಿತಾಗಿ ಸಮಾಲೋಚನೆ ನಡೆಸಲಿದೆ. ಪಕ್ಷದಲ್ಲಿ ಶಿಸ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಾವೇ ಅವಕಾಶಗಳನ್ನು ಸೃಷ್ಠಿಸಿಕೊಳ್ಳಬೇಕು. ಪಕ್ಷದ ಪ್ರಾಮಾಣಿಕತೆ ಹಾಗೂ ಕಾರ್ಯಚಟುವಟಿಕೆಗಳನ್ನು ಪಕ್ಷದ ಸಮಿತಿ ನಿಗಾ ವಹಿಸುತ್ತಿದೆ ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.

Advertisement

ಇದನ್ನೂ ಓದಿ:ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ವಯಂಘೋಷಿತ ಮುಖ್ಯಮಂತ್ರಿ: ಈಶ್ವರಪ್ಪ ವ್ಯಂಗ್ಯ

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್. ಆರ್ ಪಾಟೀಲ್, ‌ಮಹಿಳಾ ಘಟಕದ. ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್, ಪಕ್ಷದ ಮುಖಂಡರು, ಶಾಸಕರು, ವಿವಿಧ ಘಟಕಗಳ ಅಧ್ಯಕ್ಷರು, ಪಕ್ಷದ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರ ವಿಭಾಗೀಯ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ ಸಿಂಗ್ ಸ್ವಾಗತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next