Advertisement
ಸೋಮವಾರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಇರುವವರೆಗೂ ಆ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಕಾಯಂ ಆಗಿ ಪ್ರತಿಪಕ್ಷದ ಸ್ಥಾನ ಸಿಗಲಿದೆ. ಇನ್ನೂ ಮೂರೂವರೆ ವರ್ಷ ಪ್ರತಿಪಕ್ಷ ಸ್ಥಾನದಲ್ಲಿ ಕೂರಬೇಕಾಗುತ್ತದೆ ಎಂದು ಹತಾಶೆಯಿಂದ ಸಿದ್ದರಾಮಯ್ಯ ಮನಬಂದಂತೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.
Related Articles
Advertisement
ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರು ತಮ್ಮದೇ ಆದ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇದನ್ನು ಸುಪ್ರೀಂ ಕೋರ್ಟ್ ಗಮನಕ್ಕೂ ತಂದಿದ್ದಾರೆ. ಇನ್ನೇನು ತೀರ್ಪು ಪ್ರಕಟವಾಗಲಿದೆ ಎಂಬ ಸಂದರ್ಭದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುತ್ತದೆಯೇ ಎಂದು ಪ್ರಶ್ನಿಸಿದರು.
ಸತ್ಯ ಶೋಧನೆ ಮಾಡಿಕಾಂಗ್ರೆಸ್ ಮತ್ತು ಜೆಡಿಎಸ್‌ನ 17 ಶಾಸಕರು ಏಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಅವರು ನಿಯಮಬದ್ಧವಾಗಿ ರಾಜೀನಾಮೆ ಕೊಟ್ಟಿದ್ದನ್ನು ನೀವು ಅಂಗೀಕರಿಸಿದ್ದರೆ ಈ ಗೊಂದಲ ಸೃಷ್ಟಿಯಾಗುತ್ತಿರಲಿಲ್ಲ. ಅಂದಿನ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಿತೂರಿ ನಡೆಸಿ ರಾಜೀನಾಮೆ ಪತ್ರವನ್ನೇ ಅಂಗೀಕರಿಸಲಿಲ್ಲ. ಪುನಃ ರಾಜೀನಾಮೆ ಕೊಟ್ಟರೂ ನಿಯಮಬದ್ದವಾಗಿ ನೀಡಿಲ್ಲ ಎಂದು ಆಕ್ಷೇಪಿಸಿದ್ದೀರಿ. 17 ಮಂದಿ ಶಾಸಕರನ್ನು ಮಾತನಾಡಿಸಿ, ಅವರ ಬಾಯಿದಂಲೇ ಕೇಳಿ ಏಕಾಗಿ ರಾಜೀನಾಮೆ ನೀಡಿದ್ದಾರೆ ಎಂಬುದನ್ನು ಹೇಳುತ್ತಾರೆ ಎಂದು ವಾಗ್ಧಾಳಿ ನಡೆಸಿದರು. ಉಪಚುನಾವಣೆಗೂ ಮುನ್ನ ಜನತೆಯಲ್ಲಿ ಗೊಂದಲ ಸೃಷ್ಟಿಸಿ ಅದರ ಲಾಭ ಪಡೆಯಬಹುದೆಂಬ ಸಿದ್ದರಾಮಯ್ಯನವರ ಲೆಕ್ಕಾಚಾರ ಎಂದಿಗೂ ಯಶ ಕಾಣುವುದಿಲ್ಲ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಕನಸನ್ನು ಕೈ ಬಿಡಲಿ ಎಂದರು. ನಾನು ವಿಡಿಯೋದಲ್ಲಿ ಏನು ಮಾತನಾಡಿದ್ದೇನೆ ಎಂಬುದು ನನಗೆ ಗೊತ್ತಿದೆ. ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡಿರುವುದನ್ನು ಯಾರೂ ಚಿತ್ರೀಕಿಸಿದರೂ ಎಂಬುದು ಗೊತ್ತಿಲ್ಲ. ನನ್ನ ಹೇಳಿಕೆಯಿಂದ ನ್ಯಾಯಾಲಯದಲ್ಲಿ ಅನರ್ಹರಿಗೆ ಯಾವುದೇ ರೀತಿಯ ಹಿನ್ನಡೆ ಉಂಟಾಗುವುದಿಲ್ಲ. ಖಂಡಿತ ಅವರಿಗೆ ನ್ಯಾಯ ಸಿಗಲಿದೆ. ನ್ಯಾಯಾಲಯದ ತೀರ್ಪು ಬಂದ ಬಳಿಕ ಅವರು ಕಾಂಗ್ರೆಸ್, ಜೆಡಿಎಸ್ ಅಥವಾ ಸ್ವತಂತ್ರವಾಗಿ ಸ್ಪರ್ಧಿಸುತ್ತಾರೆ. ಅದು ಅವರಿಗೆ ಸಂಬಂಧಿಸಿದ ವಿಷಯ. ಇದರಲ್ಲಿ ನಮ್ಮ ಪಾತ್ರ ಏನೂ ಇಲ್ಲ ಎಂದರು. ಗೊಂದಲ ಸೃಷ್ಟಿಸಬೇಡಿ:
ನೆರೆ ಸಂತ್ರಸ್ತರಿಗೆ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯವನ್ನು ಜಾಹೀರಾತಿನಲ್ಲಿ ನೀಡಿದರೆ, ಅದಕ್ಕೂ ಟೀಕೆ ಮಾಡುತ್ತೀರಿ. ನಾವು ನೀಡಿರುವ ಲೆಕ್ಕ ಸರಿಯಿಲ್ಲ ಎಂದಾದರೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಬಹುದು. ಅದನ್ನು ಬಿಟ್ಟು ಸಂತ್ರಸ್ತರಲ್ಲಿ ಏಕೆ ಗೊಂದಲ ಸೃಷ್ಟಿಸುತ್ತಿದ್ದೀರಿ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದರು.