Advertisement

ಡಿ ಕೆ ಶಿವಕುಮಾರ್ ಜತೆ ನಾವಿದ್ದೇವೆ: ಸೋನಿಯಾ ಗಾಂಧಿ ಭರವಸೆ

09:53 AM Sep 06, 2019 | keerthan |

ನವದೆಹಲಿ: ಡಿ ಕೆ ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು ಹಾಗೂ ಕಾಂಗ್ರೆಸ್ ಪಕ್ಷ ನಿಲ್ಲಲಿದೆ ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ.

Advertisement

ಗುರುವಾರ ಸಂಸದ ಡಿಕೆ ಸುರೇಶ್ ಅವರಿಗೆ ಕರೆ ಮಾಡಿ ಡಿ ಕೆ ಶಿವಕುಮಾರ್ ಅವರ ಬಗ್ಗೆ ಸೋನಿಯಾ ಗಾಂಧಿ ವಿಚಾರಿಸಿದರು. ಡಿ ಕೆ ಶಿವಕುಮಾರ್ ಅವರ ಆರೋಗ್ಯ ಹೇಗಿದೆ, ಅವರ ಮಾನಸಿಕ ಸ್ಥಿತಿ ಹೇಗಿದೆ ಎಂದು ವಿಚಾರಿಸಿದರು.

ಸುಮಾರು ಮೂರು ನಿಮಿಷಗಳ ಕಾಲ ಮಾತನಾಡಿದ ಸೋನಿಯಾ ಗಾಂಧಿ ಅವರು ‘ಬಿಜೆಪಿ ವಿರೋಧ ಪಕ್ಷಗಳ ನಾಯಕರನ್ನು ಮಟ್ಟಹಾಕಲು ದ್ವೇಷದ ರಾಜಕಾರಣ ಮಾಡುತ್ತಿದೆ. ಹೀಗಾಗಿ ಡಿ ಕೆ ಶಿವಕುಮಾರ್ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ. ಈ ಸಮಯದಲಿ ನಾವೆಲ್ಲರೂ ಅವರ ಜತೆ ಇದ್ದೇವೆ’ ಎಂದು ಸುರೇಶ್ ಅವರಿಗೆ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next