Advertisement

ಕಾಂಗ್ರೆಸ್ ಪಕ್ಷ ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಲ್ಲಲಿದೆ: ಡಿಕೆ ಶಿವಕುಮಾರ್

01:04 PM Nov 05, 2020 | keerthan |

ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ವಿಚಾರ ರಾಜಕೀಯ ಪ್ರೇರಿತವಾಗಿದೆ. ಬಿಜೆಪಿಯವರು ಒತ್ತಡ ತರಲು ಮಾಡುತ್ತಿರುವ ಪ್ರಯತ್ನ ಇದಾಗಿದೆ. ಕಾಂಗ್ರೆಸ್ ಪಕ್ಷ ವಿನಯ್ ಕುಲಕರ್ಣಿಯವರ ಬೆಂಬಲಕ್ಕೆ ನಿಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೀಶ್ ಗೌಡ ಪ್ರಕರಣವನ್ನು ಈಗಾಗಲೇ ಪೊಲೀಸರು ವಿಚಾರಣೆ ಮಾಡಿ ಮುಗಿಸಿದ್ದಾರೆ. ಆದರೆ ಮತ್ತೆ ಅದನ್ನು ಕೆದಕುವ ಪ್ರಯತ್ನ ಮಾಡಲಾಗುತ್ತಿದೆ. ರಾಜಕೀಯವಾಗಿ ಇದನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.

ವಿನಯ್ ಕುಲಕರ್ಣಿಯವರು ಪ್ರಭಾವಿ ಎನ್ನುವ ಕಾರಣಕ್ಕೆ ಇಂತಹ ಪ್ರಯತ್ನ ಮಾಡಲಾಗುತ್ತಿದೆ. ಅವರನ್ನು ಮಟ್ಟಹಾಕುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಆದರೆ ಸಿಬಿಐ ಯಾರದೋ ಒತ್ತಡಕ್ಕೆ ಮಣಿಯುವುದಿಲ್ಲ. ಕಾನೂನಿನ ಪ್ರಕಾರವೇ ನಡೆದುಕೊಳ್ಳಲಿದೆ. ಸಿಬಿಐ ನವರು ಎಲ್ಲಾ ವಿಚಾರಣೆ ಮುಗಿಸಲಿ. ಮುಂದೆ ನಾವು ಏನು ಮಾಡಬೇಕು ಯೋಚಿಸುತ್ತೇವೆ ಎಂದರು.

ಇದನ್ನೂ ಓದಿ:ಯೋಗೀಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ, ಸಹೋದರ ವಿಜಯ್ ಸಿಬಿಐ ವಶಕ್ಕೆ

ಸಿಬಿಐ ಕಾನೂನು ಬದ್ಧವಾಗಿಯೇ ನಡೆಯುತ್ತಿದೆ. ಕಾನೂನು ಬಿಟ್ಟು ಅವರು ಏನನ್ನೂ‌ ಮಾಡುವುದಿಲ್ಲ. ಸಿಬಿಐನವರು ರಾಜಕೀಯಕ್ಕೆ ತಲೆಬಾಗಬಾರದು. ಸಚಿವ ಜಾರ್ಜ್ ಅವರಿಗೆ ಎಷ್ಟು ಕಿರುಕುಳ ಕೊಟ್ಟಿದ್ದರು ಎಲ್ಲವೂ ಗೊತ್ತಿದೆ. ರಾಜಕಾರಣದಲ್ಲಿ ಚಕ್ರ ತಿರುಗುತ್ತಿರುತ್ತದೆ. ಸಿಬಿಐ ನವರು ರಾಜಕೀಯ ಅಸ್ತ್ರವಾಗಬಾರದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next