Advertisement

ಆಡಳಿತ ವಿರೋಧಿ ಅಲೆ ಉಂಟಾಗಿದೆ; ಗುಜರಾತ್‌ನಲ್ಲಿ ಕಾಂಗ್ರೆಸ್‌ಗೇ ಜಯ: ರಾಹುಲ್‌

10:27 PM Oct 31, 2022 | Team Udayavani |

ಕೋತುರ್‌: ಶೀಘ್ರದಲ್ಲಿಯೇ ಗುಜರಾತ್‌ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಗಳಿಸಲಿದೆ ಎಂದು ವಯನಾಡ್‌ ಸಂಸದ ರಾಹುಲ್‌ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತ್‌ ಜೋಡೋಯಾತ್ರೆಯಲ್ಲಿರುವ ಅವರು ತೆಲಂಗಾಣದ ಕೋತುರ್‌ ಎಂಬಲ್ಲಿ ಮಂಗಳವಾರ ಮಾತನಾಡಿದರು.

Advertisement

ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಗುಜರಾತ್‌ನಲ್ಲಿ ಆಡಳಿತ ವಿರೋಧಿ ಅಲೆ ಉಂಟಾಗಿದೆ. ಅದಕ್ಕೆ ಪೂರಕವಾಗಿ ಆಮ್‌ ಆದ್ಮಿ ಪಾರ್ಟಿ ಕೂಡ ಬಿರುಸಿನ ಪ್ರಚಾರ ನಡೆಸುತ್ತಿದೆ. ಆದರೆ, ಆ ಪಕ್ಷ ಕಾಂಗ್ರೆಸ್‌ಗೆ ಪ್ರಬಲ ಎದುರಾಳಿಯೇ ಅಲ್ಲವೆಂದರು. ಏಕೆಂದರೆ ಆ ಪಕ್ಷಕ್ಕೆ ತಳಮಟ್ಟದಲ್ಲಿ ಯಾವುದೇ ಬೆಂಬಲ ಇಲ್ಲ ಎಂದರು. ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ವೇಳೆ ತೆಲಂಗಾಣ ರಾಷ್ಟ್ರ ಸಮಿತಿ ಜತೆಗೆ ಯಾವುದೇ ರೀತಿ ಹೊಂದಾಣಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಹಿಮಾಚಲ ಪ್ರದೇಶ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಪ್ರಚಾರ ಮತ್ತು ಇತರ ವಿಚಾರಗಳ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ನಿರ್ಧರಿಸಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next