Advertisement

ಚುನಾವಣಾ ಫ‌ಲಿತಾಂಶಕ್ಕೆ ‘ಕೈ’ಹರ್ಷ; ಜನತೆ ಬದಲಾವಣೆ ಬಯಸಿರುವುದಕ್ಕೆ ಸಾಕ್ಷಿ ಎಂದ ನಾಯಕರು

08:13 PM Apr 30, 2021 | Team Udayavani |

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗಳಿಸಿರುವುದಕ್ಕೆ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾರ್ಯಾಧ್ಯಕ್ಷ ಸಲೀಂ ಆಹಮದ್‌ ಸೇರಿದಂತೆ ಹರ್ಷ ವ್ಯಕ್ತಪಡಿಸಿದ್ದು, ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದು ಬಣ್ಣಿಸಿದ್ದಾರೆ.

Advertisement

ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ರಾಜ್ಯದ ಜನತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌ ಬಗ್ಗೆ ತೋರಿದ ಪ್ರೀತಿ ಹಾಗೂ ವಿಶ್ವಾಸಕ್ಕೆ ಧನ್ಯವಾದಗಳು. ಜನತೆಯ ಸೇವೆಯಲ್ಲಿ ಕಾಂಗ್ರೆಸ್‌ ತೊಡಗಲಿದೆ. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೂ ಅಭಿನಂದನೆಗಳು. ಪ್ರಮುಖವಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಕಠಿಣ ಪರಿಶ್ರಮಕ್ಕೆ ವಂದನೆಗಳು ಎಂದು ಹೇಳಿದ್ದಾರೆ.

ಇದನ್ನೂ ಓದಿ :ಸೋಂಕಿತರು, ವೈದ್ಯರು ಮನೋಸ್ಥೈರ್ಯ ಕಳೆದುಕೊಳ್ಳದಂತೆ ಕುಮಾರಸ್ವಾಮಿ ಮನವಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯದ ಜನತೆ ಕಾಂಗ್ರೆಸ್‌ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಹತ್ತು ಸ್ಥಳೀಯ ಸಂಸ್ಥೆಗಳಲ್ಲಿ ಏಳು ಕಡೆ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲಿ ನಾವು ಉತ್ತಮ ಸಾಧನೆ ಮಾಡಿದ್ದೆವು. ಈಗ ಸ್ಥಳೀಯ ಸಂಸ್ಥೆಗಳಲ್ಲಿ ನಾವು ಗೆದ್ದಿದ್ದೇವೆ. ರಾಜ್ಯದಲ್ಲಿ ಬದಲಾವಣೆಯಾಗಬೇಕು ಎಂದು ಜನ ಬಯಸಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜನತೆಯ ಕೆಂಗಣ್ಣಿಗೆ ಗುರಿಯಾಗಿರುವುದರಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಸೂಕ್ತ ಎಂದು ಹೇಳಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಅವರು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರು ಬಿಜೆಪಿಯನ್ನು ಧೂಳೀಪಟ ಮಾಡಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಮತದಾರರು ಎದ್ದು ನಿಂತಿದ್ದಾರೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಸುಳ್ಳನ್ನು ಬಂಡವಾಳ ಮಾಡಿಕೊಂಡು ರಾಜಕೀಯ ಮಾಡುವ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ತಿಳಿಸಿದ್ದಾರೆ.

Advertisement

ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಭರ್ಜರಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕೇಳದುಕೊಂಡಿರುವುದು ಫ‌ಲಿತಾಂಶದಿಂದ ಸ್ಪಷ್ಟವಾಗಿದೆ. ಈ ಚುನಾವಣೆಯಲ್ಲಿ ಮತದಾರ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾನೆ.
– ಸಿದ್ದರಾಮಯ್ಯ , ಪ್ರತಿಪಕ್ಷ ನಾಯಕ

Advertisement

Udayavani is now on Telegram. Click here to join our channel and stay updated with the latest news.

Next