Advertisement

ಎಲ್ಲಾ ಕ್ಷೇತ್ರದಲ್ಲಿಯೂ ಕಾಂಗ್ರೆಸ್‌ ಗೆಲುವು

02:59 PM May 08, 2018 | Team Udayavani |

ತಿ.ನರಸೀಪುರ: ರಾಜ್ಯ ಸರ್ಕಾರದ ಸಾಧನೆ, ಜನಪರವಾದ ಯೋಜನೆಗಳು ಹಾಗೂ ಸಮರ್ಥವಾದ ಅಭ್ಯರ್ಥಿಗಳು ಕಣದಲ್ಲಿರುವುದರಿಂದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಸಂಸದ ಆರ್‌.ಧ್ರುವನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.

Advertisement

ತಾಲೂಕಿನ ಬನ್ನೂರು ಪಟ್ಟಣದಲ್ಲಿ ಲೋಕೋಪಯೋಗಿ ಸಚಿವ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಡಾ.ಎಚ್‌.ಸಿ.ಮಹದೇವಪ್ಪ ಅವರ ಪರ ಮತಯಾಚಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಐದು ವರ್ಷಗಳ ಕಾಲ ಸ್ಥಿರ ಸರ್ಕಾರವನ್ನು ನೀಡಿ ರೈತಪರ ಮತ್ತು ಎಲ್ಲಾ ವರ್ಗದ ಬಡವರ ಪರವಾದ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿದ್ದ ಡಾ.ಎಚ್‌.ಸಿ.ಮಹದೇವಪ್ಪ ಅವರು ಆಡಳಿತದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗ ಸಾಥ್‌ ನೀಡಿ, ತಿ.ನರಸೀಪುರ ವಿಧಾನಸಭಾ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿದ್ದಾರೆ. ಅಲ್ಲದೆ ಹಲವು ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಪರಿವರ್ತಿಸಿ ಸಂಚಾರದಲ್ಲಿ ಸುಧಾರಣೆಯನ್ನು ತಂದಿದ್ದಾರೆ. ಅಭಿವೃದ್ಧಿಗೆ ದುಡಿಯುವ ಮಹದೇವಪ್ಪ ಅವರನ್ನು ಮತ್ತೆ ಕ್ಷೇತ್ರದ ಜನರು ಬೆಂಬಲಿಸಬೇಕು. ಕಾರ್ಯಕರ್ತರು ಹಾಗೂ ಮುಖಂಡರು ಕೂಡ ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಬೇಕೆಂದು ತಿಳಿಸಿದರು.

ಕಾಂಗ್ರೆಸ್‌ ಯುವ ಮುಖಂಡ ಬಿ.ಕೆ.ನಿರಂಜನಕುಮಾರ್‌ ಮಾತನಾಡಿ, ಸಾರ್ಜಜನಿಕ ಜೀವನದಲ್ಲಿ ಬದ್ಧತೆಯುಳ್ಳ ಆರ್‌.ಧ್ರುವನಾರಾಯಣ ಅವರು ಉತ್ತಮ ಸಂಸದೀಯ ಪಟುವಾಗಿದ್ದಾರೆ. ಅವರ ನಾಯಕತ್ವದಲ್ಲಿ ಅಭಿವೃದ್ಧಿ ಹರಿಕಾರ ಡಾ.ಎಚ್‌.ಸಿ.ಮಹದೇವಪ್ಪ ಅವರನ್ನು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತೂಮ್ಮೆ ಸರ್ಕಾರ ರಚನೆ ಮಾಡಲು ಬಹುಮತವನ್ನು ನೀಡಬೇಕು. ಕಾಂಗ್ರೆಸ್‌ ಪಕ್ಷಕ್ಕೆ ಬನ್ನೂರು ಭಾಗದಲ್ಲಿ ರಾಜಕೀಯ ಶಕ್ತಿಯನ್ನು ನೀಡುವ ಕೆಲಸವನ್ನು ಮಾಡುತ್ತೇವೆ ಎಂದು ತಿಳಿಸಿದರು.

ಚುನಾವಣಾ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ವೈ.ಎನ್‌.ಶಂಕರೇಗೌಡ, ಕಾಂಗ್ರೆಸ್‌ನ ಮಾಜಿ ಜಿಲ್ಲಾಧ್ಯಕ್ಷ ಎನ್‌.ಶಂಕರೇಗೌಡ, ಪುರಸಭಾ ಅಧ್ಯಕ್ಷೆ ಮಂಜುಳಾ ಶ್ರೀನಿವಾಸ್‌, ಉಪಾಧ್ಯಕ್ಷ ಬಿ.ಎಸ್‌.ರಾಮಲಿಂಗೇಗೌಡ, ಮಾಜಿ ಅಧ್ಯಕ್ಷರಾದ ಅಜೀಜ್‌ ಉಲ್ಲಾ, ಮುನಾವರ ಪಾಷಾ, ಸದಸ್ಯರಾದ ಬಿ.ಎಸ್‌.ರವೀಂದ್ರಕುಮಾರ್‌, ರಮೇಶ್‌, ಮುರಳಿ, ಕೃಷ್ಣ, ಬಿ.ಬೈರವಮೂರ್ತಿ, ಮುಖಂಡರಾದ ಲಕ್ಷ್ಮಣ, ರಮೇಶ, ಪೀರ್‌ಖಾನ್‌, ಹರ್ಷದ್‌, ಲಕ್ಷ್ಮಣ, ಸುರೇಶ, ಮನು, ಬಾಳೆಗೊನೆ ರಮೇಶ, ವಿಷಕಂಠಯ್ಯ, ಪಿಎ ವಿನೋದ್‌ ಹಾಗೂ ಇನ್ನಿತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next