Advertisement

ಸ್ಥಳೀಯ ಸಂಸ್ಥೆ ಚುನಾವಣೆ; RSS ತವರು ಕ್ಷೇತ್ರ ನಾಗ್ಪುರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ

10:09 AM Jan 10, 2020 | Nagendra Trasi |

ಮುಂಬೈ: ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ನಡೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಶಿವಸೇನಾ, ಕಾಂಗ್ರೆಸ್ ಹಾಗೂ ಶರದ್ ಪವಾರ್ ನೇತೃತ್ವದ ಎನ್ ಸಿಪಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಭಾರತೀಯ ಜನತಾ ಪಕ್ಷ ತೀವ್ರ ಹಿನ್ನಡೆ ಅನುಭವಿಸಿದೆ. ಬಿಜೆಪಿ ಭದ್ರಕೋಟೆ ನಾಗ್ಪುರದಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಿದೆ.

Advertisement

ನಾಗ್ಪುರ್ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತವರು. ಆದರೆ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ 73 ಜಿಲ್ಲಾ ಕೌನ್ಸಿಲ್ ಸ್ಥಾನಗಳಲ್ಲಿ ಹಾಗೂ 145 ಪಂಚಾಯತ್ ಸಮಿತಿ ಸ್ಥಾನಗಳಲ್ಲಿ ಜಯ ಗಳಿಸಿದೆ. ಎನ್ ಸಿಪಿ 46 ಜಿಲ್ಲಾ ಕೌನ್ಸಿಲ್ ಮತ್ತು 80 ಪಂಚಾಯತ್ ಸಮಿತಿ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಶಿವಸೇನಾ 49 ಜಿಲ್ಲಾ ಕೌನ್ಸಿಲ್ ಹಾಗೂ 117 ಪಂಚಾಯತ್ ಸಮಿತಿ ಸ್ಥಾನಗಳಲ್ಲಿ ಜಯಗಳಿಸಿರುವುದಾಗಿ ವರದಿ ತಿಳಿಸಿದೆ.

ನಾಗ್ಪುರ್ ಜಿಲ್ಲೆಯೊಂದರಲ್ಲಿಯೇ ಕಾಂಗ್ರೆಸ್ ಪಕ್ಷ 58 ಸ್ಥಾನಗಳಲ್ಲಿ 30ರಲ್ಲಿ ಗೆಲುವು ಸಾಧಿಸಿದೆ. ಎನ್ ಸಿಪಿ 11ರಲ್ಲಿ ಮತ್ತು ಶಿವಸೇನಾ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದು, ಮೈತ್ರಿಕೂಟ ಒಟ್ಟು 42 ಸ್ಥಾನಗಳಲ್ಲಿ ಜಯಗಳಿಸಿದೆ. ಬಿಜೆಪಿ 15 ಸ್ಥಾನ ಗೆದ್ದಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next