Advertisement

ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಜಯ: ಸಲೀಂ ಆಹಮದ್‌ ವಿಶ್ವಾಸ

07:37 PM Oct 15, 2021 | Team Udayavani |

ಬೆಂಗಳೂರು: ಹಾನಗಲ್‌ ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಹೇಳಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾನಗಲ್‌ ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡು ಕಳೆದ ಒಂದು ವಾರದಿಂದ ಸ್ಥಳೀಯವಾಗಿ ಸಭೆ, ಸಂಘಟನೆ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಅಲೆ ಇದೆ ಎಂದು ತಿಳಿಸಿದರು.

ಬಿಜೆಪಿ ಸರ್ಕಾರದಿಂದ ಜನ ಭ್ರಮನಿರಸನರಾಗಿದ್ದು, ಬದಲಾವಣೆ ಬಯಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯ ಈ ಚುನಾವಣೆಯಲ್ಲಿ ಪ್ರಮುಖವಾಗಿ ಚರ್ಚೆಗೆ ಬರಲಿದೆ ಎಂದು ಹೇಳಿದರು.

ಬಿಜೆಪಿಗೆ ಯಾಕೆ ಮತ ಹಾಕಬೇಕು ಎಂದು ರಾಜ್ಯದ ಜನ ಪ್ರಶ್ನೆ ಮಾಡುತ್ತಿದ್ದಾರೆ. 55 ರೂ. ಇದ್ದ ಪೆಟ್ರೋಲ್‌ 108 ರೂ. ಹಾಗೂ 50 ರೂ. ಇದ್ದ ಡೀಸೆಲ್‌ 100 ರೂ. ಆಗಿದೆ.ಬಿಜೆಪಿ ಅಧಿಕಾರಕ್ಕೆ ಬಂದರೆ ಸ್ವರ್ಗ ತೋರಿಸುತ್ತೇವೆ ಎಂದಿದ್ದರು. ಅವರು ಸ್ವರ್ಗ ತೋರಲಿಲ್ಲ, ನರಕ ತೋರಿಸಿದ್ದಾರೆ. ಕೋವಿಡ್‌ ಸಂಧರ್ಭದಲ್ಲಿ ರಾಜ್ಯದಲ್ಲಿ 3 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದು, ಸರ್ಕಾರ 37 ಸಾವಿರ ಎಂದು ಸುಳ್ಳು ಹೇಳಿದೆ. ಹೀಗಾಗಿ ಮತ ಕೇಳಲು ಬಿಜೆಪಿ ನೈತಿಕತೆ ಕಳೆದುಕೊಂಡಿದೆ. ಹೀಗಾಗಿ ಜನ ಕಾಂಗ್ರೆಸ್‌ ಗೆ ಆಶೀರ್ವಾದ ಮಾಡಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ದಚ್ಚು ಜೊತೆ “ಕ್ರಾಂತಿ”ಗೆ ಸಜ್ಜಾದ ಡಿಂಪಲ್ ಕ್ವೀನ್ ರಚಿತಾ ರಾಮ್

Advertisement

ಬಿಜೆಪಿ ಶಾಸಕರುಗಳೇ ತಮ್ಮದು 30 ಪರ್ಸೆಂಟ್‌ ಸರ್ಕಾರ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಉತ್ತರ ನೀಡಬೇಕು. ಬಿಜೆಪಿ ಭ್ರಷ್ಟಾಚಾರ ಇಂದು ಎಲ್ಲರ ಮನೆ ಮಾತಾಗಿದೆ. ಯಡಿಯೂರಪ್ಪ ಅವರು ಕಣ್ಣೀರು ಹಾಕಿದ್ದು ಯಾಕೆ, ಅವರ ಮೇಲೆ ಭ್ರಷ್ಟಾಚಾರ ಆರೋಪ ಬಂದಿದ್ದಕ್ಕೆ ಅವರನ್ನು ಆ ಸ್ಥಾನದಿಂದ ತೆಗೆದು ಹಾಕಿದರೋ ಅಥವಾ ಹಿರಿಯರನ್ನು ಕಸದ ಬುಟ್ಟಿಗೆ ಎಸೆಯುವ ಸಂಸ್ಕೃತಿ ಮುಂದುವರಿಸಿದ್ದಾರೋ ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ನಾಯಕರು ಉತ್ತರಿಸಬೇಕು ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next