Advertisement

Congress ಆಂತರಿಕ ಸರ್ವೆಯಲ್ಲಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು: ಸಲೀಂ ಅಹ್ಮದ್

06:40 PM Feb 11, 2024 | Team Udayavani |

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿಂತೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಫೆಬ್ರವರಿ ಅಂತ್ಯದ ವೇಳೆ ಬಿಡುಗಡೆ ಮಾಡಲಾಗುವುದು. ಈಗಾಗಲೇ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅರ್ಹರ ಪಟ್ಟಿಯನ್ನು ಕೆಪಿಸಿಸಿಯಿಂದ ಎಐಸಿಸಿಗೆ ಕಳುಹಿಸಲಾಗಿದ್ದು, ಪರಿಶೀಲನೆ, ಸರ್ವೆ ಕಾರ್ಯ ನಡೆಯುತ್ತಿದ್ದು, ಶೀಘ್ರ ಅಂತಿಮವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

Advertisement

ರವಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಈಗಾಗಲೇ ಪಕ್ಷದ ಆಂತರಿಕ ಸರ್ವೇ ವರದಿಯಲ್ಲಿ ಬಹಿರಂಗಗೊಂಡಿದೆ. ಕಾಂಗ್ರೆಸ್‌ನ ಗ್ಯಾರಂಟಿ ಮತ್ತು ಕೇಂದ್ರದ ಬಿಜೆಪಿಯ 10 ವರ್ಷಗಳ ದುರಾಡಳಿತ ಕಾಂಗ್ರೆಸ್‌ಗೆ ಗೆಲುವು ತಂದಕೊಡಲಿದೆ. ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಸಿಗುವುದಿಲ್ಲ ಎಂದು ಬಿಜೆಪಿಯವರಿಗೆ ಅರಿವಾಗಿದ್ದು, ಅದಕ್ಕಾಗಿಯೇ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಪಕ್ಷದ ಸಭೆ ಮಾಡುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next