Advertisement

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

08:17 AM Sep 19, 2024 | Team Udayavani |

ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 5 ಗ್ಯಾರಂಟಿಗಳನ್ನು ನೀಡಿದ್ದ ಕಾಂಗ್ರೆಸ್‌ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 7 ಗ್ಯಾರಂಟಿಗಳನ್ನು ನೀಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸದಿಲ್ಲಿಯಲ್ಲಿ ಬುಧವಾರ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದರು.

Advertisement

ಈ ಬಾರಿ ಗೆದ್ದರೆ ರಾಜ್ಯದಲ್ಲಿ ಜಾತಿ ಗಣತಿ ನಡೆಸುವುದಾಗಿ ವಾಗ್ಧಾನ ಮಾಡಿದೆ. 18-60 ವರ್ಷ ವಯಸ್ಸಿನ ಮಹಿಳೆಯರಿಗೆ ಮಾಸಿಕ 2,000 ರೂ.ಗಳ ನೆರವು ನೀಡುವುದಾಗಿಯೂ ಘೋಷಿಸಲಾಗಿದೆ. 500 ರೂ.ಗೆ ಎಲ್ಪಿಜಿ ಸಿಲಿಂಡರ್‌, ವೃದ್ಧರು, ವಿಧವೆಯರು ಮತ್ತು ಅಂಗವಿಕಲರಿಗೆ 6,000 ರೂ.ಗಳ ಪಿಂಚಣಿ ಮತ್ತು ಸರಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ, 300 ಯೂನಿಟ್‌ ಉಚಿತ ವಿದ್ಯುತ್‌ ಮತ್ತು 25 ಲಕ್ಷ ರೂ.ಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆಯ ಭರವಸೆಯನ್ನು ಕಾಂಗ್ರೆಸ್‌ ನೀಡಿದೆ.

ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ “ನಾವು 7 ಭರವಸೆಗಳನ್ನು ನೀಡುತ್ತಿದ್ದು, ಅವುಗಳನ್ನು ಈಡೇರಿಸುತ್ತೇವೆ. ಅಲ್ಲದೆ, ಇನ್ನೂ ಅನೇಕ ಭರವಸೆಗಳನ್ನು ನೀಡಲಿದ್ದೇವೆ.

ಚಂಡೀಗಢದಲ್ಲಿ ಬಿಡುಗಡೆಯಾಗಲಿರುವ 53 ಪುಟಗಳ ಪ್ರಣಾಳಿಕೆಯಲ್ಲಿ ಅವುಗಳನ್ನು ಘೋಷಿಸಲಾಗುವುದು’ ಎಂದರು. ಅ.5ರಂದು ಹರಿಯಾಣ ಚುನಾವಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next