Advertisement

ಬಳ್ಳಾರಿ ಪಾಲಿಕೆ ಚುನಾವಣೆಯಲ್ಲೂ ಕಾಂಗ್ರೆಸ್ ಜಯಭೇರಿ: ಶಾಸಕ ರೆಡ್ಡಿ ಪುತ್ರನಿಗೂ ಸೋಲು!

03:43 PM Apr 30, 2021 | Team Udayavani |

ಬಳ್ಳಾರಿ: ತೀವ್ರ ಕುತೂಹಲ ಮೂಡಿಸಿದ್ದ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಗಳಿಸಿದೆ. 39 ವಾರ್ಡ್ ‍ಗಳಲ್ಲಿ 21 ವಾರ್ಡ್ ಗಳಲ್ಲಿ ಜಯಗಳಿಸುವ ಮೂಲಕ ಬಳ್ಳಾರಿ ಕಾಂಗ್ರೆಸ್ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದೆ.

Advertisement

ನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶುಕ್ರವಾರ ಮತ ಎಣಿಕೆ ಕಾರ್ಯ ನಡೆದಿದ್ದು, ಕಾಂಗ್ರೆಸ್ ಪಕ್ಷ 21, ಬಿಜೆಪಿ 13, ಐದು ವಾರ್ಡ್ ಗಳಲ್ಲಿ ಕಾಂಗ್ರೆಸ್ ಬಂಡಾಯ (ಪಕ್ಷೇತರ) ಆಭ್ಯರ್ಥಿಗಳು ಜಯಗಳಿಸಿದ್ದಾರೆ.

ಮೊದಲ ಸುತ್ತಿನಲ್ಲಿ ನಡೆದ ಎಂಟು ವಾರ್ಡ್ ಗಳ ಎಣಿಕೆಯಲ್ಲಿ ಐದು ವಾರ್ಡ್ ಗಳಲ್ಲಿ ಜಯಗಳಿಸುವ ಮೂಲಕ ಆರಂಭದಲ್ಲೇ ಮುನ್ನಡೆ ಸಾಧಿಸಿದ್ದ ಬಿಜೆಪಿ ಪಕ್ಷಕ್ಕೆ ಎರಡನೇ ಸುತ್ತಿನಿಂದ ಹಿನ್ನಡೆಯಾಗಿ ಕಾಂಗ್ರೆಸ್ ಮುನ್ನಡೆ ಸಾಧಿಸುವಲ್ಲಿ ಯಶವಸ್ವಿಯಾಯಿತು.

ಇದನ್ನೂ ಓದಿ:ಬೀದರ್ ನಗರಸಭೆ ಚುನಾವಣೆ: ಬಿಜೆಪಿಗೆ ಮುಖಭಂಗ, ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನ

ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಪ್ರತಿನಿಧಿಸಿರುವ ಬಳ್ಳಾರಿ ನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 28 ವಾರ್ಡ್ ಗಳಲ್ಲಿ ಕಾಂಗ್ರೆಸ್ 12, ಬಿಜೆಪಿ 12, 4 ವಾರ್ಡ್ ಗಳಲ್ಲಿ ಪಕ್ಷೇತರರು ಜಯಗಳಿಸಿದ್ದು, ಕಾಂಗ್ರೆಸ್ ಪಕ್ಷ ಬಿಜೆಪಿಗೆ ಸಮಾನವಾಗಿ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ

Advertisement

ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಪ್ರತಿನಿಧಿಸುವ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೌಲ್ ಬಜಾರ್ ನಲ್ಲಿ 11 ವಾರ್ಡ್ ಗಳ ಪೈಕಿ ಬಿಜೆಪಿ ಕೇಬಲ ಒಂದು ವಾರ್ಡ್ ನಲ್ಲಿ ಮಾತ್ರ ಗೆದ್ದಿದ್ದು, 9 ವಾರ್ಡ್ ನಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಒಂದು ವಾರ್ಡ್ ನಲ್ಲಿ ಕಾಂಗ್ರೆಸ್ ಬಂಡಾಯ ಪಕ್ಷೇತರ ಅಭ್ಯರ್ಥಿ ಜಯಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಸತತ ಎರಡನೇ ಬಾರಿಯೂ ಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ರೆಡ್ಡಿ ಪುತ್ರ ಸೋಲು

ಪಾಲಿಕೆ ಚುನಾವಣೆಯಲ್ಲಿ ಹೈವೋಲ್ಟೇಜ್ ವಾರ್ಡ್ ಎಂದೇ ಕರೆಯಲಾಗುತ್ತಿದ್ದ 18ನೇ ವಾರ್ಡ್ ನಲ್ಲಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಪುತ್ರ ಜಿ.ಶ್ರವಣ್ ಕುಮಾರ್ ರೆಡ್ಡಿ ಅವರಿಗೆ ಸೋಲು ಎದುರಾಹಿದೆ. ಪ್ರತಿ ಸ್ಪರ್ಧಿ ಕಾಂಗ್ರೆಸ್ ನ ಎಂ. ನಂದೀಶ್ ಅವರು 128 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next