Advertisement

ನಾಯಕನಹಟ್ಟಿ ಕೈ ವಶ : ಸಚಿವ ಶ್ರೀ ರಾಮುಲುಗೆ ಮುಖಭಂಗ

12:55 PM Dec 30, 2021 | Team Udayavani |

ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಅಧಿಕಾರದ ಗದ್ದುಗೆ ಹಿಡಿದಿದೆ‌. ಬಿಜೆಪಿ ಕೇವಲ ಎರಡು ಸ್ಥಾನ ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

Advertisement

ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಪ್ರತಿನಿಧಿಸುವ ಮೊಳಕಾಲ್ಮೂರು ಕ್ಷೇತ್ರದಲ್ಲಿರುವ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ ಜಾರಿದ್ದು, ಸಚಿವರಿಗೆ ಭಾರಿ ಮುಖಭಂಗವಾಗಿದೆ.

ಒಟ್ಟು 16 ಸ್ಥಾನಗಳ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ 11 ಸ್ಥಾನ, ಬಿಜೆಪಿ 2 ಸ್ಥಾನ ಪಡೆದಿದೆ. ಪಕ್ಷೇತರರು 3 ಸ್ಥಾನಗಳಲ್ಲಿ ಗೆದ್ದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next