ವಿಜಯಪುರ: ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಉಪ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆದಿದ್ದು, ಕಾಂಗ್ರೆಸ್‌ನ ಸುನೀಲಗೌಡ ಪಾಟೀಲ ಭರ್ಜರಿ ಜಯ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಗೂಳಪ್ಪ ಶಟಗಾರ ಅವರು ಸೋಲನ್ನಪ್ಪಿದ್ದಾರೆ. ಒಟ್ಟು 7 ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಬೆಂಬಲ ನೀಡಿತ್ತು.
ಮೇಲ್ಮನೆ ಸ್ಥಾನಕ್ಕೆ ಸೆ.6ರಂದು ಮತದಾನ ನಡೆದಿತ್ತು, ವಿ.ಬಿ. ದರ್‌ಬಾರ್ ಹೈಸ್ಕೂಲ್‌ನಲ್ಲಿ ಮತ ಎಣಿಕೆ ನಡೆಯಿತು. ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ಇದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದು ವಿಜೇತ ಸುನೀಲ ಗೌಡ ಪಾಟೀಲ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಪಕ್ಷೇತರರಾಗಿ ಆಯ್ಕೆ ಯಾಗಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿಗೆ ಸೇರಿ ಶಾಸಕರಾಗಿ ಆಯ್ಕೆಯಾಗಿದ್ದ ಹಿನ್ನಲೆಯಲ್ಲಿ ಸ್ಥಾನ ತೆರವಾಗಿತ್ತು.
ಸುನೀಲ್ ಅವರು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಅವರ ಸಹೋದರ.