Advertisement

Lok Sabha Election: ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಧೂಳೀಪಟವಾಗಲಿದೆ..ಪ್ರಧಾನಿ ಮೋದಿ

12:53 PM May 14, 2024 | Team Udayavani |

ಲಕ್ನೋ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಉತ್ತರಪ್ರದೇಶದಲ್ಲಿ ಒಂದೇ ಒಂದು ಸ್ಥಾನದಲ್ಲೂ ಜಯಗಳಿಸಲಾರದು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಮೇ 14) ಭವಿಷ್ಯ ನುಡಿದಿದ್ದಾರೆ.

Advertisement

ಇದನ್ನೂ ಓದಿ:Goa: ಶ್ರೀ ಲಯಿರಾಯಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಗೋಬಿ ಮಂಚೂರಿ ಮಾರಾಟಕ್ಕೆ ನಿಷೇಧ

ಇಂಡಿಯಾ ಟುಡೇ ಜೊತೆ ಮಾತನಾಡಿದ ಅವರು, ಉತ್ತರಪ್ರದೇಶದಲ್ಲಿ ಬಿಜೆಪಿ ಮುಖ್ಯ ಗುರಿಯನ್ನು ಹೊಂದಿದ್ದು, ಅದೇ ರೀತಿ ದೇಶಾದ್ಯಂತ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 400ಕ್ಕಿಂತಲೂ ಅಧಿಕ ಸ್ಥಾನ ಪಡೆಯುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಅಮೇಠಿಯಿಂದ ರಾಹುಲ್‌ ಗಾಂಧಿ ವಯನಾಡ್‌ ಗೆ ಪಲಾಯನಗೈದಿದ್ದಾರೆ. ರಾಯ್‌ ಬರೇಲಿಯಿಂದ ಸ್ಪರ್ಧಿಸುವ ಮೊದಲೇ ವಯನಾಡ್‌ ನಲ್ಲಿ ಸ್ಪರ್ಧಿಸಿದ್ದು, ಇದೀಗ ಉತ್ತರಪ್ರದೇಶದ ಜನರು ರಾಹುಲ್‌ ನಡೆಯ ಬಗ್ಗೆ ಪ್ರಶ್ನಿಸುತ್ತಿದ್ದಾರೆ ಎಂದು ದೂರಿದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಧೂಳೀಪಟವಾಗಲಿದ್ದು, ಪಕ್ಷ 40ಕ್ಕಿಂತ ಹೆಚ್ಚು ಸ್ಥಾನ ಪಡೆಯಲಾರದು ಎಂದು ಪ್ರಧಾನಿ ಮೋದಿ ಹೇಳಿದರು.

Advertisement

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಆಡಳಿತ ವೈಖರಿಯನ್ನು ಹೊಗಳಿದ ಪ್ರಧಾನಿ ಮೋದಿ ಅವರು, ಯೋಗಿ ನೇತೃತ್ವದಲ್ಲಿ ಉತ್ತರಪ್ರದೇಶ ಅಭಿವೃದ್ಧಿ ಕಂಡಿದೆ. ಉತ್ತರಪ್ರದೇಶದ ಜನರು ಕುಟುಂಬ ರಾಜಕಾರಣವನ್ನು ತಿರಸ್ಕರಿಸಿದ್ದಾರೆ. ಯೋಗಿ ಆದಿತ್ಯನಾಥ್‌ ಆಡಳಿತಾವಧಿಯಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ಜನರು ಗಮನಿಸಿದ್ದಾರೆ ಎಂದರು.

“ ಒಮ್ಮೆ ನನ್ನ ತಾಯಿ ಕಾಶಿ ಅಭಿವೃದ್ಧಿ ಬಗ್ಗೆ ಕೇಳಿದ್ದರು. ಅದಕ್ಕೆ ನಾನು ರಾಜ್ಯದಲ್ಲಿ ಎಲ್ಲಿಯವರೆಗೆ ಸಮಾಜವಾದಿ ಪಕ್ಷ ಆಡಳಿತ ನಡೆಸುತ್ತದೆಯೋ ಅಲ್ಲಿಯವರೆಗೆ ನನಗೆ ಏನು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದೆ. ಆದರೆ ರಾಜ್ಯದಲ್ಲಿ ಒಂದು ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ನಾನು ಕಾಶಿ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಹೇಳಿರುವುದಾಗಿ ಹಿಂದಿನ ಘಟನೆಯನ್ನು ನೆನಪಿಸಿಕೊಂಡರು. ಪ್ರಧಾನಿ ಮೋದಿ ತಾಯಿ ಹೀರಾಬೆನ್‌ ಮೋದಿ ಅವರು 2022ರಲ್ಲಿ ಗುಜರಾತ್‌ ನಲ್ಲಿ ನಿಧನರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next