Advertisement

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

05:47 PM May 11, 2024 | Team Udayavani |

ಫೂಲ್ಬನಿ(ಒಡಿಶಾ): 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 50 ಸ್ಥಾನಗಳಲ್ಲೂ ಗೆಲುವು ಸಾಧಿಸಲ್ಲ. ಅಷ್ಟೇ ಅಲ್ಲ ಚುನಾವಣೆ ನಂತರ ಕಾಂಗ್ರೆಸ್‌ ಪಕ್ಷಕ್ಕೆ ವಿರೋಧ ಪಕ್ಷದ ಸ್ಥಾನಮಾನವೂ ಸಿಗಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ.

Advertisement

ಇದನ್ನೂ ಓದಿ:Gangavathi: ಪೊಲೀಸ್ ಠಾಣೆಯಲ್ಲೇ ಒಂದೇ ಕೋಮಿನ ಎರಡು ಗುಂಪುಗಳ ಮಾರಾಮಾರಿ

ಒಡಿಶಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಒಡಿಶಾದ ಅಸ್ಮಿತೆ ಅಪಾಯದಲ್ಲಿದೆ. ಬಿಜೆಪಿ ಅದನ್ನು ರಕ್ಷಿಸುತ್ತದೆ. ಒಡಿಶಾದ ಅಭಿವೃದ್ಧಿಗೆ ಡಬ್ಬಲ್‌ ಎಂಜಿನ್‌ ಸರ್ಕಾರದ ಅಗತ್ಯವಿದೆ. ಅದಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿಕೊಂಡರು.

ಒಡಿಶಾ ರಾಜ್ಯದಲ್ಲಿ ಅಪಾರ ಪ್ರಮಾಣದ ನೈಸರ್ಗಿಕ ಸಂಪತ್ತು ಇದ್ದರೂ ಕೂಡಾ ಜನರನ್ನು ಬಡತನದಲ್ಲಿ ಇರಿಸಿರುವುದಕ್ಕೆ ಬಿಜು ಜನತಾ ದಳವೇ ಕಾರಣ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ ಯುವರಾಜ 2014ರಿಂದಲೂ ಓದಿದ್ದನ್ನೇ ಓದುತ್ತಿದ್ದಾರೆ. ಈ ಬಾರಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ ಎಂಬುದನ್ನು ಬರೆದಿಟ್ಟುಕೊಳ್ಳಿ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next