ಮುರ್ಶಿದಾಬಾದ್ : ಪಂಚಾಯತ್ ಚುನಾವಣೆಯ ಪೂರ್ವದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಂದ ಒಂದು ದಿನದ ನಂತರ, ಹತ್ಯೆಯ ಹಿಂದೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕೈವಾಡವಿದೆ ಎಂದು ಪಕ್ಷವು ಶನಿವಾರ ಆರೋಪಿಸಿದೆ.
Advertisement
ಫುಲ್ಚಂದ್ ಶೇಖ್ (45) ಅವರು ಶುಕ್ರವಾರ ರತನ್ಪುರ ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದಾಗ ಟಿಎಂಸಿಯ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ತೀವ್ರವಾಗಿ ಗಾಯಗೊಂಡ ಶೇಖ್ ಅವರನ್ನು ಕಂದಿ ಆಸ್ಪತ್ರೆಗೆ ಸಾಗಿಸಲಾಯಿತು. ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ.