Advertisement

ತಾಲೂಕಿನಲ್ಲಿ ಮಿತಿ ಮೀರಿದ ಭ್ರಷ್ಟಾಚಾರ: ಗಣೇಶ್‌

03:31 PM Nov 24, 2020 | Suhan S |

ಗುಂಡ್ಲುಪೇಟೆ: ಶಾಸಕ ಸಿ.ಎಸ್‌.ನಿರಂಜನಕುಮಾರ್‌ ತಮ್ಮ ವೈಯುಕ್ತಿಕ ಅಭಿವೃದ್ಧಿಯಲ್ಲಿ ತೊಡಗಿ ಕ್ಷೇತ್ರದ ಅಭಿವೃದ್ಧಿ ಮರೆತಿದ್ದಾರೆ ಎಂದುಕಾಂಗ್ರೆಸ್‌ ಮುಖಂಡ ಎಚ್‌.ಎಂ.ಗಣೇಶ್‌ ಪ್ರಸಾದ್‌ ಟೀಕಿಸಿದರು.

Advertisement

ತಾಲೂಕಿನ ಬರಗಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಈ ಹಿಂದೆಕ್ಷೇತ್ರವನ್ನು ಮಾದರಿಯನ್ನಾಗಿಸಲು ಮಾಜಿ ಸಚಿವ ದಿ.ಮಹದೇವಪ್ರಸಾದ್‌ ಹಾಗೂ ಮಾಜಿ ಸಚಿವೆ ಡಾ.ಗೀತಾ ಶ್ರಮಿಸಿದ್ದರು. ಆದರೆ, ಇದೀಗಅಧಿಕಾರಿಗಳ ಮೂಲಕ ಹಣ ವಸೂಲಿಗೆ ಮುಂದಾಗಿರುವ ಶಾಸಕರು ಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿದ್ದಾರೆ. ತಾಲೂಕಿನ ಉದ್ದೇಶಿತ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ವಿಳಂಬವಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ತಾಲೂಕಿನಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಹಣ ಕೊಡದೆ ಯಾವುದೇ ಕೆಲಸಗಳೂ ಆಗುತ್ತಿಲ್ಲ ಎಂದು ಸಾರ್ವಜನಿಕರುಬೇಸತ್ತಿದ್ದಾರೆ. ಇಂತಹವರಿಗೆ ಕ್ಷೇತ್ರದ ಜನತೆ ಮುಂಬರುವಚುನಾವಣೆಯಲ್ಲಿ ಜನತೆ ತಕ್ಕ ಪಾಠಕಲಿಸಲಿದ್ದಾರೆ ಎಂದರು.

ಸಭೆಯಲ್ಲಿ ಚಾಮುಲ್‌ ಅಧ್ಯಕ್ಷ ಎಚ್‌.ಎಂ.ನಂಜುಂಡ ಪ್ರಸಾದ್‌, ಜಿಪಂ ಸದಸ್ಯ ಪಿ.ಚನ್ನಪ್ಪ, ತಾಪಂ ಸದಸ್ಯೆ ಕಲಾವತಿ, ಕಾಡಾ ಮಾಜಿ ಅಧ್ಯಕ್ಷ ಎಚ್‌.ಎಸ್‌.ನಂಜಪ್ಪ, ಹಾಪ್‌ಕಾಮ್ಸ್‌ ಮಾಜಿ ಜಿಲ್ಲಾಧ್ಯಕ್ಷ ಶ್ರೀಕಂಠಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುನಿ ರಾಜು, ಪುರಸಭೆ ಮಾಜಿ ಅಧ್ಯಕ್ಷ ಎಲ್‌.ಸುರೇಶ್‌, ಮುಖಂಡ ಮಂಚಹಳ್ಳಿ ಲೋಕೇಶ್‌ ಸೇರಿದಂತೆ ವಿವಿಧ ಘಟಕಗಳ ಪದಾಧಕಾರಿಗಳು ಮತ್ತುಕಾರ್ಯಕರ್ತರು ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next