ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಸೋನಿಯಾ ಗಾಂಧಿ ಸಹಿತ ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸು ಹಾಕಿ ದೌರ್ಜನ್ಯ ಮಾಡುತ್ತಿದ್ದು, ವಿಪಕ್ಷಗಳ ಧ್ವನಿ ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.
ಇಲ್ಲಿನ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಶಿಡ್ಲಘಟ್ಟ ವತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್‌ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನುಕೂಗಿದರು. ಕೆಪಿಸಿಸಿ ವಕ್ತಾರ ವಿ.ಎಸ್.ಉಗ್ರಪ್ಪ ಮಾತನಾಡಿ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ತನಿಖಾಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ವಿರೋಧಪಕ್ಷಗಳ ನಾಯಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸುವಮೂಲಕ ಹೆದರಿಸುವ ಕೆಲಸವನ್ನು ಮಾಡುತ್ತಿದೆ. ಕಾಂಗ್ರೆಸ್ ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದರು.
ಮಾಜಿ ಶಾಸಕ ಡಾ. ಎಂ.ಸಿ.ಸುಧಾಕರ್ ಮಾತನಾಡಿ, ಜಿಲ್ಲೆಯನ್ನು ಬಳ್ಳಾರಿ ಮಾಡಲು ಹೊರಟಿದ್ದಾರೆ ಕಾಂಗ್ರೆಸ್ ಪಕ್ಷದನಾಯಕರು ಬಳ್ಳಾರಿಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆವಿರುದ್ಧ ಪಾದಯಾತ್ರೆ ನಡೆಸಿ ಬಳ್ಳಾರಿ ಗಣಿ ಧಣಿಗಳಿಗೆ ಪಾಠಕಲಿಸಿದ್ದಾರೆ. ಅದೇ ರೀತಿ ಕ್ಷೇತ್ರದಲ್ಲಿ ಆರೋಗ್ಯ ಸಚಿವ ಸುಧಾಕರ್‌ಅವರಿಗೆ ಮುಂಬರುವ ವಿಧಾನಸಭೆಯ ಚುನಾವಣೆಯಲ್ಲಿ ಜನರೇ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
ಕೇಂದ್ರ ಸರ್ಕಾರ ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಪಕ್ಷಗಳನ್ನು ಹತ್ತಿಕ್ಕುತ್ತಿದೆ. ವಿಚಾರಣೆ ಹೆಸರಲ್ಲಿ ವಿಶ್ವಾಸ ಕುಗ್ಗಿಸುವ ಕುತಂತ್ರಮಾಡುತ್ತಿದ್ದಾರೆ ಎಂದು ಮೋದಿ, ಅಮಿತ ಶಾ ಹಾಗೂ ಬಿಜೆಪಿವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಪಿಸಿಸಿ ಕಾರ್ಯಧ್ಯಕ್ಷರಾಮಲಿಂಗರೆಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದಯ ಶಂಕರ್, ಶಾಸಕ ವಿ.ಮುನಿಯಪ್ಪ, ಎಸ್.ಎನ್.ಸುಬ್ಟಾರೆಡ್ಡಿ,ಮಾಜಿ ಶಾಸಕಿ ಅನುಸೂಯಮ್ಮ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷಕೇಶವರೆಡ್ಡಿ, ನಂದಿ ಆಂಜಿನಪ್ಪ, ಯಲುವಹಳ್ಳಿ ರಮೇಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರಾ ಇತರರು ಇದ್ದರು.