ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ ವತಿಯಿಂದ ಮಂಗಳವಾರ ಕಾರ್ಕಳ ಶಾಸಕರ ಖಾಸಗಿ ಕಚೇರಿ ವಿಕಾಸದ ಮುಂದೆ ಜನಾಗ್ರಹ ಪ್ರತಿಭಟನೆ ನಡೆಯಿತು.ಶಾಸಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಶಾಸಕರಿಗೆ ಮನವಿ ಮಾಡುವ ಕಾಂಗ್ರೆಸ್ ಪ್ರಯತ್ನಕ್ಕೆ ಪೊಲೀಸರು ತಡೆ ಒಡ್ಡಿದರು.
ಇದೆ ವೇಳೆ ಕಾಂಗ್ರೆಸ್ ಮುಖಂಡರು ಮತ್ತು ಪೊಲೀಸರ ಮದ್ಯೆ ಬಿಸಿ ಮಾತುಗಳು ನಡೆದವು.
ಶಾಸಕರ ವಿಕಾಸ ಕಚೇರಿ ಮುಂದೆ ಕಾಂಗ್ರೆಸ್ ನ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮನವಿ ನೀಡಲು ಕಚೇರಿ ಹತ್ತಿರಕ್ಕೆ ತೆರಳಲು ಯತ್ನಿಸಿದಾಗ ಪೊಲೀಸರು ತಡೆದರು.ವ್ರತ್ತನಿರೀಕ್ಷಕ ಸಂಪತ್ ಕುಮಾರ್ ಅವರು ವಿಕಾಸ ಕಚೇರಿ ಶಾಸಕರ ಖಾಸಗಿ ಕಚೇರಿ ಹೀಗಾಗಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಅವಕಾಶವಿಲ್ಲ.ಜತೆಗೆ ಕೊರೊನಾ ಸಂಕಷ್ಟ ಸಮಯದಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪ್ರತಿಭಟನ ನಿರತರಲ್ಲಿ ಮನವಿ ಮಾಡಿದರು.ಇದಕ್ಕೆ ಕಾಂಗ್ರೆಸ್ ಮುಖಂಡರಿಂದ ಪ್ರತಿರೋಧ ವ್ಯಕ್ತವಾಯಿತು.
ಇದನ್ನೂ ಓದಿ: ರಾಹುಲ್ ಗಾಂಧಿ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್: ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ
ಶಾಸಕರು ಇರುವ ಕಚೇರಿ ಮುಖ್ಯ ಜನರ ಸಮಸ್ಯೆಗಳು.ಸಂಕಷ್ಟ ಬೇಡಿಕೆ ಈಡೇರಿಸಲು ಶಾಸಕರು ಕ್ರಮವಹಿಸಬೇಕು ಇದು ಜನಾಗ್ರಹ. ಶಾಸಕರು ಕಚೇರಿಯೊಳಗೆ ಇರುವುದರಿಂದ ನಮಗೆ ಅವಕಾಶ ಮಾಡಿಕೊಡಬೇಕು.ಕೋವಿಡ್ ನಿಯಮ ಉಲ್ಲಂಘಿಸಿ ಬಿಳಿಬೆಂಡೆ ವಿತರಣೆ ಮಾಡಲು ಬಿಜೆಪಿಯವರಿಗೆ ಅವಕಾಶ ಕಲ್ಪಿಸುವುದಾದರೆ ನಮಗ್ಯಾಕೆ ಪ್ರತಿಭಟನೆ, ಜನ ಸೇರಲು ನಿರಾಕರಿಸುತ್ತೀರಿ ಎಂದು ಕಾಂಗ್ರೆಸ್ ಮುಖಂಡರಾದ ಮಂಜುನಾಥ ಪೂಜಾರಿ, ನೀರೆ ಕ್ರಷ್ಣ ಶೆಟ್ಟಿ, ಶುಭದ ರಾವ್, ಬಿಪಿನ್ ಚಂದ್ರಪಾಲ್ ನಕ್ರೆ ಮೊದಲಾದವರು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕೇಂದ್ರ, ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಶಾಸಕರ ವಿಕಾಸ ಕಚೇರಿ ಮುಂಭಾಗದ 25 ಮೀ.ದೂರದಲ್ಲಿ ಪ್ರತಿಭಟನೆ ಸಭೆ ನಡೆಸಿ ಜನರ ಬೇಡಿಕೆಗಳಿಗೆ ಆಗ್ರಹಿಸಿದರು.
ಕಾಂಗ್ರೆಸ್ ನ ಶಾಸಕರ ಕಚೇರಿ ಮುಂಭಾಗದ ಪ್ರತಿಭಟನೆ ಹಿನ್ನಲೆಯಲ್ಲಿ ಮೀಸಲು ಪೊಲೀಸರ ಸಹಿತ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಕೇಂದ್ರ ಮತ್ತು ರಾಜ್ಯ ಸರಕಾರದ ಜನ ವಿರೋಧಿ ನೀತಿ ಆಡಳಿತ ವೈಫಲ್ಯ ಮತ್ತು ಲಾಕ್ ಡೌನ್ ನಿಂದ ಸಂತ್ರಸ್ತರಾದ ಕಾರ್ಮಿಕ ಶ್ರಮಿಕ ವರ್ಗದವರಿಗೆಂದು ಘೋಷಿಸಿರುವ ಪ್ಯಾಕೇಜ್ ಪಡೆಯಲು ವಿಧಿಸಲಾಗಿರುವ ಕಠಿಣ ಶರತ್ತುಗಳ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ಹೆಚ್ವಿನ ಪ್ರಮಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.