ಶ್ರೀರಂಗಪಟ್ಟಣ: ಕೈ ನಾಯಕಿ ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಶ್ರೀರಂಗಪಟ್ಟಣ ತಾಲೂಕು ಕಚೇರಿ ಮುಂದೆ ತಾಲೂಕು ಘಟಕದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು .
ಕ್ಷೇತ್ರದ ಮಾಜಿ ಶಾಸಕ ರಮೇಶ್ ಬಾಬು ಬಂಡ್ಡೀಸಿದ್ದೇಗೌಡ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಧರಣಿ ಕುಳಿತು ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಪ್ರಜಾಪ್ರಭುತ್ವ ಕಗ್ಗೊಲೆ ಆಗುತ್ತಿದೆ. ಪ್ರಶ್ನೆ ಮಾಡುವವರನ್ನು ಹತ್ತಿಕ್ಕುವ ಕೆಲಸ ಮಾಡಲಾಗ್ತಿದೆ. ಇಂತಹ ಸರ್ಕಾರಗಳ ವಿರುದ್ದ ಧನಿ ಎತ್ತುವ ಕೆಲಸವಾಗಬೇಕು.ಕಾಂಗ್ರೆಸ್ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡಲಾಗ್ತಿದೆ ಎಂದು ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿ ತಹಶೀಲ್ದಾರ್ ಶ್ವೇತಾಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ರಮೇಶ್ ಬಂಡ್ಡಿಸಿದ್ದೇಗೌಡ, ತಾಲೂಕು ಬ್ಲಾಕ ಕಾಂಗ್ರೇಸ ಅಧ್ಯಕ್ಷ ಪ್ರಕಾಶ್ , ಮುಖಂಡರಾದ ಪಾಲಹಳ್ಳಿ ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ಚಂದಶ್ರೇಖರ್,ದರ್ಶನ್ ಲಿಂಗರಾಜು ಬೆಳಗೋಳ ವಿಷಕಂಠೇಗೌಡ,ಮಹಿಳಾಧ್ಯಕ್ಷೆ ಗಾಯಿತ್ರಿ,ನಗುವನಹಳ್ಳಿ ಚಲುವರಾಜು,ಎಸ್್.ಕಾಳೇಗೌಡ, ಯುವ ಮುಖಂಡರಾದ ಉದಯ್ ಚೇತನ್,ಅನಿಲ್ ವಿಷ್ಣು,ರಾಮಚಂದ್ರೆಲ್.ನಾಗರಾಜು,ಸೋಮಸುಂದರ್,,ವಾಸು,ಪುರಸಭೆ ಕೈ ಸದಸ್ಯರು ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.