ಸಲೀಂ ಅಹಮದ್ ಹೇಳಿದರು.
Advertisement
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ಕೆಲವೇ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳು ಎದುರಾಗಲಿವೆ. ಇದರ ಜೊತೆಗೆ, ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಯೂ ಎದುರಾಗಲಿದೆ. ಹಾಗಾಗಿ, ಪಕ್ಷದ ಕಾರ್ಯಕರ್ತರು, ಮುಖಂಡರು, ಹೋಬಳಿ ಮತ್ತು ಬೂತ್‌ಮಟ್ಟದಲ್ಲಿ ಯುವ ಕಾರ್ಯಪಡೆ ರಚಿಸಿಕೊಂಡು, ಪಕ್ಷದ ಪರ ಕೆಲಸ ಮಾಡುವ ಮೂಲಕ ಅತಿ ಹೆಚ್ಚುಸ್ಥಾನ ಪಡೆಯುವಂತೆ ಮಾಡಬೇಕಾಗಿದೆ ಎಂದರು.
Related Articles
Advertisement
ಶಿಸ್ತು ಕ್ರಮಕ್ಕೆ ಶಿಫಾರಸು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷರು ತಿಳಿಸಿರುವಂತೆ ಕೊರೊನಾ ಸಂದರ್ಭದಲ್ಲಿ ಪಕ್ಷದ ವತಿಯಿಂದ ಕೈಗೊಂಡ ಸಹಾಯಹಸ್ತ, ಆರೋಗ್ಯ ಹಸ್ತ, ಕಾರ್ಯಕ್ರಮಗಳು ಆಡಳಿತ ಪಕ್ಷದ ವಿರುದ್ಧ ಹೋರಾಟ ನಡೆಸಲು ಪ್ರಬಲ ಅಸ್ತ್ರವಾಗಿದೆ. ಈ ಹಿನ್ನೆಲೆ ಆರೋಗ್ಯ ಹಸ್ತ, ಸಹಾಯಹಸ್ತ, ಪಂಚಾಯಿತಿ ಕಮಿಟಿ, ವಾರ್ಡ್ ಕಮಿಟಿ ರಚನೆ ಇವುಗಳ ಜವಾಬ್ದಾರಿ ಹೊತ್ತಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕೂಡಲೇ ಮಾಹಿತಿಯನ್ನು ಪಕ್ಷದ ಕಚೇರಿಗೆ ಸಲ್ಲಿಸಬೇಕು. ಇಲ್ಲದಿದ್ದ ಪಕ್ಷದಲ್ಲಿ ಅಂತಹ ಅಧ್ಯಕ್ಷರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹೈಕಮಾಂಡ್ ನಿರ್ಧಾರಕ್ಕೆ ಸ್ವಾಗತ: ವಿಧಾನ ಪರಿಷತ್‌ನ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಈಗಾಗಲೇ ಕೆಲವರು ಅರ್ಜಿ ಸಲ್ಲಿಸಿದ್ದಾರೆ. ಪರಿಶಿಷ್ಟ ಜಾತಿ ಎಡಗೈ ಸಮುದಾಯದಿಂದ ಜಿಪಂ ಸದಸ್ಯರಾದ ಕೆಂಚಮಾರಯ್ಯ, ಒಕ್ಕಲಿಗ ಸಮಾಜದಿಂದ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಆಡಿಟರ್ ಯಲಚವಾಡಿ ನಾಗರಾಜು, ವಾಲ್ಮೀಕಿ ಸಮುದಾಯದಿಂದ ರಾಜ್ಯವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಸೀ.ಬಿ.ನರಸಿಂಹಯ್ಯ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ನನಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಕೆಲವರು ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಬಂದ ಅರ್ಜಿಗಳನ್ನು ಪಕ್ಷದ ಹೈಕಮಾಂಡ್‌ಗೆ ಕಳುಹಿಸಲಾಗುವುದು. ಜಿಲ್ಲೆಯ ಮುಖಂಡರು ಮತ್ತು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಸ್ವಾಗತವಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಸ್.ಷಪಿ ಅಹಮದ್, ಮಾಜಿ ಶಾಸಕ ಡಾ. ಎಸ್. ರಫೀಕ್ ಅಹಮದ್, ಕೆಪಿಸಿಸಿ ವಕ್ತಾರ ಮುರಳೀಧರ್ ಹಾಲಪ್ಪ, ಕೆಂಚಮಾರಯ್ಯ, ಹೊನ್ನಗಿರಿಗೌಡ, ಯಲಚವಾಡಿ ನಾಗರಾಜು, ಚಂದ್ರಶೇಖರಗೌಡ, ಮರಿಚನ್ನಮ್ಮ, ಸುಜಾತಾ, ಪುಟ್ಟರಾಜು, ರೇವಣ್ಣ
ಸಿದ್ದಯ್ಯ ಮತ್ತಿತರರು ಇದ್ದರು. ಬಿಜೆಪಿ ಸರ್ಕಾರಕ್ಕೆ ಜೀವವೇ ಇಲ್ಲ
ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರ್ಕಾರಕ್ಕೆ ಜೀವವೇ ಇಲ್ಲ. ಇದೊಂದು ನಿಜೀರ್ವ ಸರ್ಕಾರ. ಮಹಿಳೆಯರು, ಮಕ್ಕಳ ಮೇಲಿನ ಅತ್ಯಾಚಾರ ಏರು ಮುಖವಾಗಿದೆ. ಅಲ್ಲದೆ,ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದನ್ನುತಹಬದಿಗೆ ತರಬೇಕಾದ ಗೃಹ ಸಚಿವರು ಉಡಾಫೆ ಉತ್ತರ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಈ ಎಲ್ಲ ಅಂಶಗಳನ್ನು ಜನರ ಮುಂದಿಡುವಕೆಲಸವನ್ನುಕಾಂಗ್ರೆಸ್‌ಕಾರ್ಯಕರ್ತರು ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದರು.