ನವದೆಹಲಿ: ಮಧ್ಯಪ್ರದೇಶ ಕಾಂಗ್ರೆಸ್ ಸರಕಾರದಲ್ಲಿ ತಲ್ಲಣ ಸೃಷ್ಟಿಗೆ ಕಾರಣವಾಗಿರುವ ಅಲ್ಲಿನ ಪ್ರಭಾವಿ ಯುವ ಕಾಂಗ್ರೆಸ್ ನಾಯಕ
ಜ್ಯೋತಿರಾದಿತ್ಯ ಸಿಂಧಿಯಾ ಅವರು ಅವರು
ಕಾಂಗ್ರೆಸ್ ಪಕ್ಷದಲ್ಲಿನ ತನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿಂಧಿಯಾ ಅವರು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.
ನವದೆಹಲಿಯಲ್ಲಿ ಇಂದು ಸಿಂಧಿಯಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಈ ಅಚ್ಚರಿಯ ಬೆಳವಣಿಗೆ ನಡೆದಿದೆ.
ಜ್ಯೋತಿರಾದಿತ್ಯ ಸಿಂಧಿಯಾ ಅವರ ಈ ಅಚ್ಚರಿಯ ನಡೆ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ರಾಹುಲ್ ಗಾಂಧಿ ನಿಕಟವರ್ತಿಯಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇದೀಗ ಭಾರತೀಯ ಜನತಾ ಪಕ್ಷವನ್ನು ಸೇರಲಿದ್ದಾರೆಯೇ ಎಂಬ ಕುತೂಹಲ ಉಂಟಾಗಿದೆ.