Advertisement

ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ನಾಳೆ

11:11 PM Sep 24, 2019 | Team Udayavani |

ಬೆಂಗಳೂರು: 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಂತಿಮ ತೀರ್ಮಾನ ಕೈಗೊಳ್ಳಲು ಕಾಂಗ್ರೆಸ್‌ ಗುರುವಾರ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ನೇತೃತ್ವದ ರಾಜ್ಯ ಚುನಾವಣಾ ಸಮಿತಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌, ಎಂ.ಬಿ. ಪಾಟೀಲ್‌, ಎಚ್‌.ಕೆ. ಪಾಟೀಲ್‌, ಸತೀಶ್‌ ಜಾರಕಿಹೊಳಿ ಸೇರಿ ಪಕ್ಷದ ಪ್ರಮುಖ ನಾಯಕರು ಸಮಿತಿಯಲ್ಲಿದ್ದಾರೆ.

Advertisement

15 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಜಿಲ್ಲಾ ಮುಖಂಡರು ಹಾಗೂ ಕ್ಷೇತ್ರಗಳ ಸ್ಥಳೀಯ ನಾಯಕರಿಂದ ಅಭಿಪ್ರಾಯ ಪಡೆಯ ಲಾಗಿದ್ದು, ಬುಧವಾರ ಬೆಳಗಾವಿ ಜಿಲ್ಲೆಯ ಟಿಕೆಟ್‌ ಆಕಾಂಕ್ಷಿಗಳನ್ನು ಹೊರತು ಪಡಿಸಿ ಉಳಿದ ಕ್ಷೇತ್ರಗಳ ಆಕಾಂಕ್ಷಿಗಳ ಸಭೆ ಕರೆಯಲಾಗಿದೆ. ಪ್ರತಿಯೊಂದು ಕ್ಷೇತ್ರದ ಆಕಾಂಕ್ಷಿಗಳ ಜೊತೆ ದಿನೇಶ್‌ ಗುಂಡೂರಾವ್‌ ಹಾಗೂ ಸಿದ್ದರಾ ಮಯ್ಯ ಸಭೆ ನಡೆಸಲಿದ್ದಾರೆ.

ಬೆಳಗಾವಿ ಬಹುತೇಕ ಕ್ಲಿಯರ್‌: ಬೆಳಗಾವಿ ಜಿಲ್ಲೆಯ 3 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಂಗಳವಾರ ಬೆಳಗಾವಿಯಲ್ಲಿಯೇ ನಾಯಕರು ಸಭೆ ನಡೆಸಿದ್ದು, ಗೋಕಾಕ್‌ ಕ್ಷೇತ್ರಕ್ಕೆ ಲಖನ್‌ ಜಾರಕಿಹೊಳಿ, ಕಾಗವಾಡಕ್ಕೆ ಮಾಜಿ ಸಂಸದ ಪ್ರಕಾಶ್‌ ಹುಕ್ಕೇರಿ, ಅಥಣಿ ಕ್ಷೇತ್ರಕ್ಕೆ ಮಾಜಿ ಸಚಿವ ಎ.ಬಿ. ಪಾಟೀಲ್‌ ಅವರ ಹೆಸರು ಬಹುತೇಕ ಅಂತಿಮಗೊಳಿಸಲಾಗಿದ್ದು, ಗುರುವಾರ ನಡೆಯುವ ಚುನಾವಣಾ ಸಮಿತಿ ಸಭೆಯಲ್ಲಿ ಅಧಿಕೃತ ತೀರ್ಮಾನ ಕೈಗೊಂಡು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲು ರಾಜ್ಯ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next