Advertisement
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಂಬೈನಲ್ಲಿ ಅತೃಪ್ತರ ಜತೆಗೆ ಸೇರಿಕೊಂಡಿರುವ ಬೈರತಿ ಬಸವರಾಜ್ ಜತೆ ಸುಮಾರು 10 ನಿಮಿಷ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಮುಂಬೈಗೆ ತೆರಳಿರುವ ಹತ್ತು ಶಾಸಕರಲ್ಲಿ ಐವರು ಶಾಸಕರೊಂದಿಗೆ ರಾಜ್ಯ ಕಾಂಗ್ರೆಸ್ ನಾಯಕರು ವಿವಿಧ ಮೂಲಗಳಿಂದ ಸಂಪರ್ಕ ಮಾಡುವ ಪ್ರಯತ್ನ ನಡೆಸಿದ್ದು, ಬಹುತೇಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.
Related Articles
Advertisement
ರಾಜೀನಾಮೆ ಇಂಗಿತ ವ್ಯಕ್ತಪಡಿಸಿರುವ ಪರಂ: ಬೆಂಗಳೂರಿನ ಶಾಸಕರು ತಮ್ಮ ವಿರುದ್ಧ ಆರೋಪ ಮಾಡುತ್ತಿರುವುದರಿಂದ ಬೇಸತ್ತಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆ.ಸಿ. ವೇಣುಗೋಪಾಲ್ ಎದುರು ಬೆಂಗಳೂರು ಉಸ್ತುವಾರಿ ಜವಾಬ್ದಾರಿ ಬಿಟ್ಟುಕೊಡುವುದಾಗಿ ಹೇಳಿದ್ದಾರೆ ಎನ್ನಲಾಗಿದ್ದು, ಅಗತ್ಯ ಬಿದ್ದರೆ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ಸಲ್ಲಿಸಿದ ತಕ್ಷಣ ಸರ್ಕಾರ ಬಿದ್ದ ಹಾಗೆ ಅಲ್ಲ. ಮುಂಬೈನಲ್ಲಿರುವ ಎಲ್ಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಶಾಸಕರೊಂದಿಗೆ ನಾವು ಮಾತನಾಡಿದ್ದೇವೆ. ಜೆಡಿಎಸ್ ಶಾಸಕರೊಂದಿಗೆ ಅವರು ಮಾತನಾಡಿದ್ದಾರೆ. ಎಲ್ಲವನ್ನೂ ನಿಮ್ಮ ಜೊತೆ ಹಂಚಿಕೊಳ್ಳಲು ಆಗುವುದಿಲ್ಲ.-ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂದಾಗಿನಿಂದಲೂ ಬಿಜೆಪಿಯವರು ಸರ್ಕಾರ ಕೆಡವಲು ಪ್ರಯತ್ನ ನಡೆಸುತ್ತಿದ್ದಾರೆ. ಶಾಸಕರು ವಿಶೇಷ ವಿಮಾನದಲ್ಲಿ ಹೇಗೆ ಮುಂಬೈಗೆ ಹೋಗುತ್ತಾರೆ? ಬಿಜೆಪಿ ಯವರು ಕಾಂಗ್ರೆಸ್ ಶಾಸಕರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ.
-ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ಸಿಎಂ ಸ್ಥಾನವನ್ನು ಐದು ವರ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದೇವೆ. ಈಗ ಸಿಎಂ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಬೆನ್ನಿಗೆ ಚೂರಿ ಇರಿಯಲು ನಾನು ಸಿದ್ಧನಿಲ್ಲ. ನಾಯಕತ್ವ ಬದಲಾವಣೆ ಮಾಧ್ಯಮಗಳ ಸೃಷ್ಠಿ. ನಮ್ಮ ಶಾಸಕರು ಜೆಟ್ ಏರ್‌ವೆàಸ್‌ನಲ್ಲಿ ಹೋಗಿದ್ದಾರೆ. ಅವರಿಗೆ ಆ ಶಕ್ತಿ ಇದೆಯಾ ? ಇದರ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಿದೆ.
-ಡಿ.ಕೆ.ಶಿವಕುಮಾರ್, ಜಲ ಸಂಪನ್ಮೂಲ ಸಚಿವ ಮೈತ್ರಿ ಸರ್ಕಾರದಲ್ಲಿ ನನ್ನ ಕ್ಷೇತ್ರದ ಒಂದು ಕೆಲಸವೂ ಆಗುತ್ತಿಲ್ಲ. ಪರಮೇಶ್ವರ್ ಉಪ ಮುಖ್ಯಮಂತ್ರಿ ಆಗಿದ್ದರೂ ಯಾವುದೇ ಅಧಿಕಾರವಿಲ್ಲ. ಅವರು ಝೀರೋ ಟ್ರಾಫಿಕ್‌ಗೆ ಮಾತ್ರ ಸೀಮಿತ ಆಗಿದ್ದಾರೆ. ಎಲಿವೇಟೆಡ್ ಕಾರಿಡಾರ್ ಮಾಡಲು ತೀರ್ಮಾನಿಸಿದರೂ ಸಂಬಂಧ ಪಟ್ಟ ಶಾಸಕರ ಗಮನಕ್ಕೆ ತರುವುದಿಲ್ಲ.
-ಮುನಿರತ್ನ, ರಾಜೀನಾಮೆ ಸಲ್ಲಿಸಿರುವ ಶಾಸಕ