Advertisement

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಇಂದು

11:51 PM Jul 14, 2019 | Team Udayavani |

ಬೆಂಗಳೂರು: ಅಧಿವೇಶನದಲ್ಲಿ ವಿಶ್ವಾಸಮತ ಯಾಚಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ ಮಾಡಿರುವುದರಿಂದ ಸೋಮವಾರದಿಂದ ಯಾವುದೇ ಶಾಸಕರು ಸದನಕ್ಕೆ ಗೈರು ಹಾಜರಾಗದಂತೆ ನೋಡಿಕೊಳ್ಳಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದಾರೆ.

Advertisement

ಅದೇ ಕಾರಣಕ್ಕೆ ಸೋಮವಾರ ವಿಧಾನಸಭೆ ಕಲಾಪ ಆರಂಭಕ್ಕೂ ಮುನ್ನವೇ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶಾಸಕಾಂಗ ಸಭೆ ನಡೆಸಿ, ವಿಧಾನಸಭೆ ಕಲಾಪ ನಡೆಯುವ ಸಂದರ್ಭದಲ್ಲಿ ಶಾಸಕರು ಅನಗತ್ಯವಾಗಿ ಹೊರಗಡೆ ತಿರುಗಾಡುವುದು, ಅನ್ಯ ಕಾರಣದ ನೆಪ ಹೇಳಿ ಸದನದಿಂದ ದೂರ ಉಳಿಯದಂತೆ ಸೂಚನೆ ನೀಡುವ ಸಾಧ್ಯತೆ ಇದೆ.

ಬಿಜೆಪಿಯವರು ಸೋಮವಾರವೇ ಮುಖ್ಯಮಂತ್ರಿ ವಿಶ್ವಾಸಮತ ಯಾಚಿಸುವಂತೆ ಒತ್ತಡ ಹೇರುವ ಸಾಧ್ಯತೆ ಇರುವುದರಿಂದ ಸ್ಪೀಕರ್‌ ರಮೇಶ್‌ ಕುಮಾರ್‌ ಯಾವತ್ತಾದರೂ ವಿಶ್ವಾಸಮತ ಯಾಚನೆಗೆ ಸೂಚಿಸುವ ಸಾಧ್ಯತೆ ಇದೆ. ಹೀಗಾಗಿ, ಎಲ್ಲರೂ ಕಡ್ಡಾಯವಾಗಿ ಸದನದಲ್ಲಿ ಹಾಜರಿರುವಂತೆ ಶಾಸಕಾಂಗ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next