Advertisement

ಸಿಎಎ ವಿರುದ್ಧ ನಿರ್ಣಯಕ್ಕೆ ಸಭಾಪತಿಗೆ ಕಾಂಗ್ರೆಸ್‌ ಪತ್ರ

11:37 PM Mar 03, 2020 | Lakshmi GovindaRaj |

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ರಾಜ್ಯದಲ್ಲಿ ಅವಕಾಶ ನೀಡಬಾರದು ಎಂದು ವಿಧಾನ ಪರಿಷತ್‌ನಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಸದಸ್ಯರು ಸಭಾಪತಿ ಅವರಿಗೆ ಪ್ರಸ್ತಾವನೆ ರೂಪದ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಪ್ರಸ್ತಾಪಕ್ಕೆ ಕಾಂಗ್ರೆಸ್‌ನ ಐವರು ಸದಸ್ಯರು ಸಹಿ ಮಾಡಿದ್ದು, ಬುಧವಾರ ಕಲಾಪದಲ್ಲಿ ಈ ವಿಚಾರ ಪ್ರಸ್ತಾಪವಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್‌ ಸದಸ್ಯ ಐವಾನ್‌ ಡಿಸೋಜಾ ಮಾಹಿತಿ ನೀಡಿದರು. ಸಿಎಎ ಕಾಯಿದೆ ಧರ್ಮದ ಆಧಾರದಲ್ಲಿ ಜಾರಿ ಮಾಡಲಾಗಿದೆ.

Advertisement

ಈ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿವೆ. ಹೀಗಾಗಿ ಕರ್ನಾಟಕದಲ್ಲೂ ಅವಕಾಶ ನೀಡಬಾರದು ಎಂದು ಕೋರಿದ್ದೇವೆ. ಪ್ರತಿಪಕ್ಷದ ಎಲ್ಲಾ ಸದಸ್ಯರು ಇದಕ್ಕೆ ಬೆಂಬಲ ನೀಡುವ ವಿಶ್ವಾಸವಿದೆ. ವಿಧಾನಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯೂ ಇದೇ ವಿಚಾರವಾಗಿ ನಡೆಯುವ ಸಾಧ್ಯತೆ ಇರಬಹುದು. ಪರಿಷತ್‌ನಲ್ಲಿ ಈ ವಿಷಯ ಚರ್ಚೆಗೆ ಬಂದ ವೇಳೆ ಇದನ್ನು ಧರ್ಮದ ಆಧಾರದಲ್ಲಿ ಜಾರಿ ಮಾಡಲು ಕೇಂದ್ರ ಮುಂದಾಗಿದೆ. ಈ ಬೆಳವಣಿಗೆ ಸಂವಿಧಾನ ಬಾಹಿರ ಎಂಬುದನ್ನು ವಿವರಿಸಿ ಕಾಯ್ದೆ ಜಾರಿಗೆ ಅವಕಾಶ ನೀಡದಂತೆ ನಿರ್ಣಯ ಕೈಗೊಳ್ಳಲು ಆಗ್ರಹಿಸಲಿದ್ದೇವೆಂದರು.

Advertisement

Udayavani is now on Telegram. Click here to join our channel and stay updated with the latest news.

Next