Advertisement

ಕಾಂಗ್ರೆಸ್ ನವರಿಗೆ ಬಿಟ್ ಕಾಯಿನ್ ನ ಅರ್ಥವೇ ಗೊತ್ತಿಲ್ಲ: ರೇಣುಕಾಚಾರ್ಯ ವ್ಯಂಗ್ಯ

04:07 PM Dec 11, 2021 | Team Udayavani |

ಶಿವಮೊಗ್ಗ: ಕಾಂಗ್ರೆಸ್ ನವರು ಬಿಟ್ ಕಾಯಿನ್ ಎನ್ನುತ್ತಿದ್ದಾರೆ. ಆದರೆ ಬಿಟ್ ಕಾಯಿನ್ ಎಂದರೆ ಏನೆಂದು ಕಾಂಗ್ರೆಸ್ ನವರಿಗೆ ಅರ್ಥವೇ ಗೊತ್ತಿಲ್ಲ. ಸುರ್ಜೇವಾಲ ಹಾಗೂ ಕಾಂಗ್ರೆಸ್ ಮುಖಂಡರು ದಾಖಲೆ ಬಿಡುಗಡೆ ಮಾಡುತ್ತಾರೆ ಎಂದು ಹೇಳಿದ್ದರು. ದಾಖಲೆ ಇದ್ದಿದ್ದರೆ ಬಿಡುಗಡೆ ಮಾಡಲು ಇಷ್ಟು ಸಮಯ ಬೇಕೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್, ಮಾಡಬಾರದ ಭ್ರಷ್ಟಾಚಾರದ ಕರ್ಮಕಾಂಡ ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್ ರಾಜಕೀಯ ಪಕ್ಷವಲ್ಲ ಬದಲಾಗಿ ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದ ಸಂಸ್ಥೆ. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ವಿಸರ್ಜನೆಯಾಗಿತ್ತು. ಆದರೆ ಕಾಂಗ್ರೆಸ್ ಹೆಸರಿನಲ್ಲಿ ಈಗ ನಕಲಿ ಕಾಂಗ್ರೆಸ್ಸಿಗರು ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಬಿಜೆಪಿ ಬಗ್ಗೆ ಆರೋಪ ಮಾಡುವ ಮೊದಲು ನಿಮ್ಮ ತಟ್ಟೆಯಲ್ಲಿ ಏನು ಬಿದ್ದಿದೆ ಎಂದು ನೋಡಿಕೊಳ್ಳಲಿ. ಬಿಜೆಪಿ ಪಕ್ಷ ಪಾರದರ್ಶಕವಾಗಿದೆ ಎಂದರು.

ಬದಲಾವಣೆ ಊಹಾಪೋಹ: ಸಿಎಂ ಬದಲಾವಣೆ ಎಂದು ನಮ್ಮ ಪಕ್ಷದ ಯಾವುದೇ ಮುಖಂಡರು ಹೇಳಿಕೆ‌ ನೀಡಿಲ್ಲ. ಸಿಎಂ ಬದಲಾವಣೆ ವಿಚಾರ ಮಾಧ್ಯಮಗಳ ಉಹಾಪೋಹ. ಸಿಎಂ ಬದಲಾವಣೆ ಹೇಳಿಕೆಗೆ ಸಂಬಂಧಿಸಿದಂತೆ ಈಶ್ವರಪ್ಪ ಅವರು ಸ್ಪಷ್ಟನೆಯನ್ನೂ ನೀಡಿದ್ದಾರೆ. ಹೀಗಾಗಿ ಈ ಬಗ್ಗೆ ಚರ್ಚೆ ಬೇಡ ಎಂದು ರೇಣುಕಾಚಾರ್ಯ ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಹಾಗೂ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು ಹಾಗೂ ಯಾರನ್ನು ಕೈಬಿಡಬೇಕು ಎಂದು ಅವರೇ ತೀರ್ಮಾನಿಸಲಿದ್ದಾರೆ‌. ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂಬುದು ಶಾಸಕರ ಆಶಯವಾಗಿದೆ. ನನಗೆ ಮಂತ್ರಿ ಪದವಿ ನೀಡಿ ಎಂದು ಹೇಳುವುದಿಲ್ಲ. ಹೊಸಮುಖಗಳನ್ನು ಸಂಘಟನೆಗೆ ಜೋಡಿಕೊಳ್ಳಿಸಬೇಕು. ಹೀಗಾಗಿ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹಕ್ಕೊತ್ತಾಯ ಮಾಡುತ್ತೇನೆ ಎಂದ ರೇಣುಕಾಚಾರ್ಯ ಅವರು, ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ವರಿಷ್ಟರು ತೀರ್ಮಾನ ಮಾಡಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next