ನವದೆಹಲಿ : ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಮತ್ತೊಂದು ಶಾಕ್ ಎದುರಾಗಿದೆ. ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ನೀಡಿದ ಸಂದರ್ಭದಲ್ಲಿ ಗೌರವ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸುದೀರ್ಘ ಪತ್ರವನ್ನೂ ಬರೆದಿದ್ದಾರೆ. ನಾನು ಪಕ್ಷಕೆ ಸೇರಿದಂದಿನಿಂದ ಅಂದಿನ ಕಾಂಗ್ರೆಸ್‌ಗೂ ಈಗಿನ ಕಾಂಗ್ರೆಸ್‌ಗೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ ನಾನು ಹುಟ್ಟಿನಿಂದಲೂ ಹಿಂದೂ ಹಾಗಾಗಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಲು ನನ್ನಿಂದ ಸಾಧ್ಯವಿಲ್ಲ ಜೊತೆಗೆ ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿಚಾರವಾಗಿ ಕಾಂಗ್ರೆಸ್ ನಡೆದುಕೊಂಡ ರೀತಿಯೂ ನನಗೆ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ ಈ ಎಲ್ಲ ವಿಚಾರಗಳಿಗೆ ಸಂಬಂಧಿಸಿ ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವುದಾಗಿ ರಾಜೀನಾಮೆ ಪತ್ರದಲ್ಲಿ ಬರೆದುಕೊಂಡಿದ್ದಾರೆ.
ಹೊಸ ಹೊಸ ವಿಚಾರಗಳನ್ನು ಹೊಂದಿರುವ ಯುವಕರಿಗೆ ಪಕ್ಷದಲ್ಲಿ ಮನ್ನಣೆ ಸಿಗುತ್ತಿಲ್ಲ. ಪಕ್ಷ ತಳಮಟ್ಟದಲ್ಲಿ ಯಾರೊಂದಿಗೂ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತಿಲ್ಲ, ದೊಡ್ಡ ನಾಯಕರು ಮತ್ತು ತಳಮಟ್ಟದ ಕಾರ್ಯಕರ್ತರ ನಡುವೆ ಅಂತರ ಹೆಚ್ಚಾಗಿದ್ದು, ಇದರಿಂದ ಪಕ್ಷ ನಷ್ಟ ಅನುಭವಿಸುತ್ತಿದೆ ಎಂದು ಹೇಳಿಕೊಂಡಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳದಿರುವ ಕಾಂಗ್ರೆಸ್ ಪಕ್ಷದ ನಿಲುವಿನಿಂದ ತಾನು ತೀವ್ರ ಅಸಮಾಧಾನಗೊಂಡಿದ್ದೇನೆ ಎಂದು ಗೌರವ್ ವಲ್ಲಭ್ ಪತ್ರದಲ್ಲಿ ಬರೆದಿದ್ದಾರೆ. ತಾನು ಹಿಂದೂ ರಾಮನ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ. ಪಕ್ಷದ ಕೆಲ ಮುಖಂಡರು ಸನಾತನ ಧರ್ಮದ ವಿರುದ್ಧ ಮಾತನಾಡುತ್ತಿದ್ದರೂ, ಪಕ್ಷ ಮೌನ ವಹಿಸಿರುವುದು ನನ್ನಿಂದ ಸಹಿಸಲು ಸಾಧ್ಯವಿಲ್ಲ.
ಇದನ್ನೂ ಓದಿ: LS Polls: ಶಾಸಕ ಎಸ್.ಆರ್.ವಿಶ್ವನಾಥ್ ವಿಶ್ವಾಸ ಗೆದ್ದ ಡಾ.ಕೆ.ಸುಧಾಕರ್