ಜಾರ್ಖಂಡ್: ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಬಿದ್ದಿದೆ, ಪಕ್ಷದ ಏಕೈಕ ಸಂಸದೆಯಾಗಿರುವ ಗೀತಾ ಕೋಡಾ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಇಂದು ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕೋಡಾ ಅವರು ರಾಜ್ಯ ಪಕ್ಷದ ಮುಖ್ಯಸ್ಥ ಬಾಬುಲಾಲ್ ಮರಾಂಡಿ ಅವರ ಸಮ್ಮುಖದಲ್ಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡರು. 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಜಾರ್ಖಂಡ್‌ನ 14 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಗೆದ್ದಿತ್ತು.
ಬಿಜೆಪಿಗೆ ಸೇರ್ಪಡೆಗೊಂಡ ಸಂಸದೆ ಗೀತಾ ಕೋಡ ಮಾತನಾಡಿ, ”ಕಾಂಗ್ರೆಸ್ ಪಕ್ಷ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತಾರೆ ಆದರೆ ಗಾಂಧಿ ಕುಟುಂಬವನ್ನು ಮಾತ್ರ ರಾಜಕೀಯದಲ್ಲಿ ಮುಂದುವರೆಸಿಕೊಂಡು ಹೋಗುತ್ತಾರೆ ಬಿಟ್ಟರೆ ಬೇರೆಯವರಿಗೆ ಮಾತು ಮಾತ್ರ ಕೊಡುತ್ತಾರೆ, ಸಾರ್ವಜನಿಕ ಹಿತಾಸಕ್ತಿ ಇರುವಲ್ಲಿ ಉಳಿಯಬೇಕು, ಕಾಂಗ್ರೆಸ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಕಡೆಗಣಿಸಲಾಗುತ್ತಿದೆ. ಹಾಗಾಗಿ ಅಲ್ಲಿ ಇರುವುದು ಸೂಕ್ತವಲ್ಲ ಎಂದು ನಿರ್ಧರಿಸಿ ನಾನು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೇನೆ, ನಾನು ಇಲ್ಲೇ ಇದ್ದು ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣ ಮಾಡುತ್ತದೆ ಎಂದು ಗೀತಾ ಕೋಡ ಹೇಳಿದರು.
ಗೀತಾ ಕೋಡಾ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರ ಪತ್ನಿಯಾಗಿದ್ದು. ಗೀತಾ ಅವರು ಸಿಂಗ್‌ಭೂಮ್‌ನಿಂದ ಸಂಸದರಾಗಿದ್ದಾರೆ.
ಇದನ್ನೂ ಓದಿ: Mangaluru: ಹವಾಮಾನ ಏರುಪೇರು ಸಾಂಕ್ರಾಮಿಕ ರೋಗದ ಮುನ್ನೆಚ್ಚರ ವಹಿಸಿ