ಚಿಕ್ಕಮಗಳೂರು: ಬಿಜೆಪಿಯವರು ಏನು ಸಾಧನೆ ಮಾಡಿದ್ದಾರೆಂದು ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ಜನಸ್ಪಂದನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿ ಮಾರ್ಪಟ್ಟಿದೆ. ಆದರೆ ಮುಖ್ಯಮಂತ್ರಿಯವರು ಬೆಂಗಳೂರು ಪೂರ್ತಿ ಮುಳುಗಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ಬೆಂಗಳೂರು ಪೂರ್ತಿ ಮುಳುಗಬೇಕಾಗಿತ್ತಾ ಎಂದು ಪ್ರಶ್ನಿಸಿದರು.
ಜನರಿಗೆ ಏನು ಸ್ಪಂದನೆ ಮಾಡದೆ ಈಗ ಜನಸ್ಪಂದನೆ ಕಾರ್ಯಕ್ರಮ ಮಾಡುತ್ತಿದ್ದೀರಿ. ಈ ಸರ್ಕಾರದಿಂದ ಬಡವರಿಗೆ ಒಂದು ಮನೆ ಕಟ್ಟಿಕೊಡುವ ಕೆಲಸವಾಗಿಲ್ಲ. ಮಳೆಯಿಂದ ಹಾನಿಗೊಳಗಾದವರಿಗೆ ಪರಿಹಾರವನ್ನು ನೀಡಿಲ್ಲ. 40% ಭ್ರಷ್ಟಾಚಾರ ಇದು ಜನಸ್ಪಂದನೆ ಕಾರ್ಯಕ್ರಮವೇ? ಬಿಬಿಎಂಪಿಯಲ್ಲಿ ಇನ್ನು ಹತ್ತು ಪರ್ಸೆಂಟ್ ಜಾಸ್ತಿಯಾಗಿದೆ ಚುನಾವಣೆ ಹತ್ತಿರ ಬಂದಾಗ 65-70 ಪರ್ಸೆಂಟ್ ಗೂ ಹೋಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ಬಿಜೆಪಿಯವರು ಲಂಚದ ಹಣದಲ್ಲಿ ಮಜಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ
ಜನ ನಿಮ್ಮನ್ನು ನೋಡಿ ನಗುತ್ತಿದ್ದಾರೆ, ನೀವು ಕಾರ್ಯಕ್ರಮ ಮಾಡುತ್ತಿದ್ದೀರಿ. ಈ ರಾಜ್ಯದಲ್ಲಿ ಸರ್ಕಾರವಿಲ್ಲ, ಸುಮ್ಮನೆ ದೂಡಿಕೊಂಡು ಹೋಗುತ್ತಿದ್ದೇವೆ ಎಂದು ಸ್ವತಃ ಸಚಿವ ಮಾಧುಸ್ವಾಮಿಯವರೇ ಹೇಳಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಎಂಬಿ ಪಾಟೀಲ್ ಟೀಕಿಸಿದ್ದಾರೆ.