Advertisement

ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ಸ್ಪರ್ಧೆ: ನಾಮಪತ್ರ ಸಲ್ಲಿಕೆ

12:42 PM Feb 08, 2021 | Team Udayavani |

ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕಾಂಗ್ರೆಸ್ ನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರು ಇಂದು ನಾಮಪತ್ರ ಸಲ್ಲಿಸಿದರು.

Advertisement

ನಜೀರ್ ಅಹ್ಮದ್ ಅವರು ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ನಾಮಪತ್ರ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಶಾಸಕರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ವಿಧಾನಪರಿಷತ್ ಸಭಾಪತಿ ಚುನಾವಣೆ: ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ

ಸಭಾಪತಿ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ನ ಬಸವರಾಜ ಹೊರಟ್ಟಿ ಅವರು ಕೂಡಾ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next