ನವದೆಹಲಿ: ಬಹುಕೋಟಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಮಂಡೋಲಿ ಜೈಲಿನಲ್ಲಿರುವ ಆರೋಪಿ ಸುಕೇಶ್ ಚಂದ್ರಶೇಖರ್ ಜೈಲು ಕೊನೆಗೆ ಅಧಿಕಾರಿಗಳು ಧಿಡೀರ್ ದಾಳಿ ನಡೆಸಿ ಐಷಾರಾಮಿ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಧಿಕಾರಿಗಳು ದಾಳಿ ನಡೆಸಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಎಕಾ ಏಕಿ ಜೈಲು ಕೊನೆಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಈ ವೇಳೆ ಜೈಲಿನೊಳಗೆ 1.5 ಲಕ್ಷ ಮೌಲ್ಯದ ಚಪ್ಪಲಿ ಹಾಗೂ 80 ಸಾವಿರ ಮೌಲ್ಯದ ಎರಡು ಜೊತೆ ಜೀನ್ಸ್ ಪ್ಯಾಂಟ್ ಗಳು ಹಾಗೂ ಅಪಾರ ಐಷಾರಾಮಿ ಸೊತ್ತುಗಳು ಪತ್ತೆಯಾಗಿದ್ದು ಅಧಿಕಾರಿಗಳು ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆ ಸುಕೇಶ್ ಚಂದ್ರಶೇಖರ್ ಅಧಿಕಾರಿಗಳ ಮುಂದೆ ಕಣ್ಣೀರಿಟ್ಟಿದ್ದಾನೆ.
200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿ ಸುಕೇಶ್ ಚಂದ್ರಶೇಖರ್ ನನ್ನು ಬಂಧಿಸಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ನೋರಾ ಫತೇಹಿ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಅಧಿಕಾರಿಗಳು ಜೈಲಿನೊಳಗೆ ದಾಳಿ ನಡೆಸಿದ ದೃಶ್ಯ ಅಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸುಕೇಶ್ ಚಂದ್ರಶೇಖರ್ ಕೊಠಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಸೋರಿಕೆ ಮಾಡಿದ ವ್ಯಕ್ತಿಯ ವಿರುದ್ಧ ಜೈಲು ಪ್ರಾಧಿಕಾರವು ವಿಚಾರಣೆ ನಡೆಸಿ ಕ್ರಮ ತೆಗೆದುಕೊಳ್ಳುತ್ತದೆ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.
ಮಾಜಿ ರೆಲಿಗೇರ್ ಪ್ರವರ್ತಕ ಮಲ್ವಿಂದರ್ ಸಿಂಗ್ ಅವರ ಪತ್ನಿಯನ್ನು ಸುಕೇಶ್ ಚಂದ್ರಶೇಖರ್ ವಂಚಿಸಿದ್ದ, ಈ ಪ್ರಕರಣದಡಿ ಫೆ. 16ರಂದು ಜಾರಿ ನಿರ್ದೇಶನಾಲಯ ಸುಕೇಶ್ ನನ್ನು ಬಂಧಿಸಿತ್ತು. ಇದಲ್ಲದೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ಇಡಿ ದಾಖಲಿಸಿದೆ.
ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಭಾರಿ ಪ್ರಮಾಣದ ಅಕ್ರಮ ಬಂದೂಕು ಪತ್ತೆ;6 ಜನರ ಬಂಧನ