Advertisement

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಹೆಸರು ದುರ್ಬಳಕೆ: ಉದ್ಯಮಿಗಳಿಗೆ ವಂಚಿಸುತ್ತಿದ್ದವನ ಬಂಧನ

04:51 PM Nov 27, 2023 | Team Udayavani |

ಬೆಂಗಳೂರು: ಬ್ಯಾಂಕ್ ಸಾಲ ಯೋಜನೆಗಳ ಮೂಲಕ ಉದ್ಯಮಿಗಳನ್ನು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನ ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.

Advertisement

ಬಂಧಿತ ಆರೋಪಿ ಯೂಸುಫ್ ಎಂಬಾತನಾಗಿದ್ದು, ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾಯಿಸಲಾಗಿದೆ. ಯೂಸುಫ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೊಂದಿಗಿಗೆ ನಂಟು, ರಾಜಕೀಯ ಚಟುವಟಿಕೆಗಳಿಗಾಗಿ ಉನ್ನತ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳುವ ಮೂಲಕ ವ್ಯಕ್ತಿಗಳನ್ನು ವಂಚಿಸಿದ್ದಾನೆ. ವಂಚನೆಗೆ ಸಂಬಂಧಿಸಿದಂತೆ ಈತನ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಇತ್ತೀಚೆಗೆ ಬ್ಯಾಂಕ್ ಸಾಲಕ್ಕೆ ಅನುಕೂಲ ಮಾಡಿಕೊಡುವ ನೆಪದಲ್ಲಿ ಹೋಟೆಲ್ ಉದ್ಯಮಿ ಶಾಜಿ ಕೃಷ್ಣನ್ ಎನ್ನುವವರಿಂದ ದಾಖಲೆಗಳನ್ನು ಪಡೆದುಕೊಂಡಿದ್ದ. ರಾಷ್ಟ್ರೀಕೃತ ಬ್ಯಾಂಕ್‌ನಿಂದ ಸಾಲ ಪಡೆದಿರುವ ಅನಿಸಿಕೆಯಿಂದ ಕೃಷ್ಣನ್, ಯೂಸುಫ್ ಅವರೊಂದಿಗೆ ಬ್ಯಾಂಕ್‌ಗೆ ತೆರಳಿ ಅಗತ್ಯ ಅರ್ಜಿಗಳಿಗೆ ಸಹಿ ಹಾಕಿದ್ದರು. ಆದರೆ, ಆರೋಪಿ 2.5 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ್ದು, ನಿಗದಿತ ಅವಧಿಯೊಳಗೆ ಮರುಪಾವತಿ ಮಾಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿರುವು ನಂತರ ತಿಳಿದುಬಂದಿದೆ. ಕೃಷ್ಣನ್ ಇತರೆ ವ್ಯವಹಾರಕ್ಕಾಗಿ ಬ್ಯಾಂಕ್ ಗೆ ಭೇಟಿ ನೀಡಿದಾಗ ವಂಚನೆ ಬೆಳಕಿಗೆ ಬಂದಿದೆ.

ಕೃಷ್ಣನ್ ಅವರ ದೂರಿನ ಆಧಾರದ ಮೇಲೆ ವಂಚನೆ ಪ್ರಕರಣವನ್ನು ದಾಖಲಿಸಲಾಗಿದ್ದು, ಯೂಸುಫ್‌ನನ್ನು ಬಂಧಿಸಲಾಗಿದೆ. ಆರೋಪಿ ಉದ್ಯಮಿಗಳೊಂದಿಗೆ ಸ್ನೇಹ ಬೆಳೆಸಿದ್ದು, ರಾಜಕೀಯ ಮುಖಂಡರು ಮತ್ತು ಬ್ಯಾಂಕ್ ಮ್ಯಾನೇಜರ್‌ಗಳೊಂದಿಗೆ ಸಂಪರ್ಕ ಹೊಂದಿದ್ದೇನೆ ಎಂದು ಹೇಳಿರುವುದು ತನಿಖೆಯಿಂದ ತಿಳಿದುಬಂದಿದೆ. ಸಚಿವರು ಮತ್ತು ಅಧಿಕಾರಿಗಳಿಗೆ ಪಾವತಿ ಮೂಲಕ ಸರ್ಕಾರಕ್ಕೆ ಸಂಬಂಧಿಸಿದ ಉದ್ಯಮದ ಕೆಲಸಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಉದ್ಯಮಿಗಳಿಂದ ಹಣ ಪಡೆದಿದ್ದ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next