Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಜಾಗೃತ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಮ್ಮೆದೊಡ್ಡಿ ಗ್ರಾಪಂ ವ್ಯಾಪ್ತಿಯಲ್ಲಿ ದಲಿತ ಕುಟುಂಬಗಳೇ ಇಲ್ಲ ಎಂದು ಕಡೂರು ವಿಭಾಗದ ಮೆಸ್ಕಾಂ ಅಧಿಕಾರಿಗಳು ವರದಿ ನೀಡಿದ್ದಾರೆ.
Related Articles
Advertisement
ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ ನಿಗಮಗಳ ವತಿಯಿಂದ ಕೊರೆಸಿರುವ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ಮೆಸ್ಕಾಂ ಹಿಂದುಳಿದಿದ್ದು, ಮೆಸ್ಕಾಂ ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳು ಪ್ರತಿ 2 ವಾರಗಳಿಗೊಮ್ಮೆ ಜಂಟಿಯಾಗಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. ನಗರಸಭೆಯು ಅಂಬೇಡ್ಕರ್ ಭವನ ಮಾತ್ರವಲ್ಲ ಅದರ ಸುಪರ್ದಿಗೆ ನೀಡಿರುವ ಯಾವ ಭವನಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡದೇ ಇದ್ದರೆ ಕ್ರಮ ಕೈಗೊಳ್ಳುವ ಮತ್ತು ಅಂಬೇಡ್ಕರ್ ಭವನಕ್ಕೆ ಅಗತ್ಯವಿರುವ ಪರಿಕರಗಳ ಪಟ್ಟಿಯನ್ನು ತಯಾರಿಸಬೇಕು ಎಂದು ತಿಳಿಸಿದರು.
ಕಡೂರಹಳ್ಳಿ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದ್ದು, ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಮರ್ಲೆ ಗ್ರಾಪಂ ವ್ಯಾಪ್ತಿಯಲ್ಲಿ 150 ದಲಿತ ಕುಟುಂಬಗಳಿದ್ದು, ಅವರಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಸರಿಯಾದ ರೀತಿಯಲ್ಲಿ ಕಲ್ಪಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗೆ ಸೂಚಿಸಿದರು. ಜಿಲ್ಲೆಯಲ್ಲಿ ಈವರೆಗೆ ದೌರ್ಜನ್ಯದಡಿ 98 ಪ್ರಕರಣಗಳು ದಾಖಲಾಗಿದ್ದು, 86 ಪ್ರಕರಣಗಳ 165 ಸಂತ್ರಸ್ತರಿಗೆ 133.20 ಪರಿಹಾರ ವಿತರಿಸಿದ್ದು, ಪರಿಹಾರ ವಿತರಣೆಗೆ ಬಾಕಿ ಉಳಿದಿರುವ 13 ಪ್ರಕರಣಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಉಪ ವಿಭಾಗಾಧಿಕಾರಿ ಎಚ್. ಎಲ್. ನಾಗರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು