Advertisement
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನಿಸುವ ಪ್ರತಿಯೊಬ್ಬ ಮಗುವಿಗೂ ಪೌಷ್ಟಿಕ ಆಹಾರ ದೊರಕಬೇಕು ಮತ್ತು ಅನ್ನಭಾಗ್ಯ, ಬಿಸಿಯೂಟ, ಅಂಗನವಾಡಿಯಲ್ಲಿ ಮಾತೃಪೂರ್ಣದಂತಹ ಮಹತ್ವಪೂರ್ಣ ಯೋಜನೆಗಳಲ್ಲಿ ನೀಡಲಾಗುತ್ತಿರುವ ಆಹಾರ ಸಾಮಗ್ರಿಗಳು ಸಮರ್ಪಕವಾಗಿ ತಲುಪುತ್ತಿವೆಯೇ ಎಂಬುದನ್ನು ಪರಿಶೀಲಿಸುವುದು ಮತ್ತು ಈ ಸಂಬಂಧ ಆಗಾಗ ಸರ್ಕಾರಕ್ಕೆ ಸೂಕ್ತ ಸಲಹೆ ನೀಡುವುದು, ಅಪೌಷ್ಟಿಕತೆ ನಿವಾರಿಸುವುದೆ ಆಯೋಗದ ಮುಖ್ಯ ಉದ್ದೇಶವಾಗಿದೆ. ಅದರಂತೆ ಆಯೋಗವು ರಾಜ್ಯಾದ್ಯಂತ ಸಂಚರಿಸಿ ಯೋಜನೆಗಳಲ್ಲಿನ ಲೋಪದೋಷಗಳನ್ನು ಅಧಿಕಾರಿಗಳಿಂದ ಪಡೆದು ಸರ್ಕಾರಕ್ಕೆ ಸೂಕ್ತ ಶಿಫಾರಸು ಮಾಡಲಿದೆ ಎಂದರು.
Related Articles
Advertisement
ಪಡಿತರ ಅಂಗಡಿ ಹಂತದಲ್ಲಿ ಆಹಾರ ಜಾಗೃತಿ ಸಭೆ ಮತ್ತು ಅಂಗನವಾಡಿ ಹಂತದಲ್ಲಿ ಬಾಲ ವಿಕಾಸ ಸಭೆ ಕಡ್ಡಾಯವಾಗಿ ನಡೆಸಬೇಕು. ಜಿಲ್ಲೆಯ ಎಲ್ಲ ಪಡಿತರ ಅಂಗಡಿಗಳಿಗೆ ಪಿ.ಒ.ಎಸ್ ಅಳವಡಿಸಬೇಕು ಮತ್ತು ಆಹಾರ ಅದಾಲತ್ ಕಡ್ಡಾಯವಾಗಿ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಮಾತನಾಡಿ, ಆಹಾರ ಆಯೋಗವು ಕಳೆದ ಎರಡೂಮೂರು ದಿನಗಳಿಂದ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಆಹಾರಕ್ಕೆ ಸಂಬಂಧಿಸಿದಂತೆ ಕೆಲ ನ್ಯೂನತೆಗಳನ್ನು ಸರಿಪಡಿಸುವಂತೆ ತಿಳಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಆಯೋಗದ ಎಲ್ಲ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದರು.
ಇನ್ನು ಮುಂದೆ ವಸತಿ ನಿಲಯಗಳಿಗೆ ತಾವು ಖುದ್ದಾಗಿ ಅನಿರೀಕ್ಷಿತವಾಗಿ ಭೇಟಿ ನೀಡುತ್ತೇನೆ ಎಂದ ಜಿಲ್ಲಾಧಿಕಾರಿಗಳುತಹಶೀಲ್ದಾರ್ರು ಮತ್ತು ಸಹಾಯಕ ಆಯುಕ್ತರು ಸಹ ಪ್ರತಿವಾರ 2-3 ವಸತಿ ನಿಲಯಗಳಿಗೆ ಭೇಟಿ ನೀಡುವಂತೆ ನಿರ್ದೇಶಿಸಿದರು. ಜಿಲ್ಲೆಯ 983 ಪಡಿತರ ಅಂಗಡಿಗಳ ಪೈಕಿ 983 ಅಂಗಡಿಯಲ್ಲಿ ಪಿ.ಓ.ಎಸ್. ಅಳವಡಿಸಿದ್ದು, ಪಿ.ಒ.ಎಸ್ ಅಳವಡಿಕೆಯಲ್ಲಿ ರಾಜ್ಯದಲ್ಲಿಯೆ ಕಲಬುರಗಿ ಜಿಲ್ಲೆ ಅಗ್ರಸ್ಥಾನದಲ್ಲಿದೆ ಎಂದರು. ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಅರುಣಕುಮಾರ ಸಂಗಾವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆ, ಅಳತೆ ಮತ್ತು ತೂಕ ಇಲಾಖೆ, ಕರ್ನಾಟಕ ರಾಜ್ಯ ಆಹಾರ ನಿಗಮ, ಆರೋಗ್ಯ ಇಲಾಖೆಯ ಅಧಿಕಾರಿಗಳು, ತಾಲೂಕಾ ಸಿ.ಡಿ.ಪಿ.ಒಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು. ಇಂದಿನಿಂದ ರಾಷ್ಟ್ರಿಯ ಪೌಷ್ಠಿಕಾಂಶ ಮಿಷನ್ ಜಾರಿ ಅಪೌಷ್ಟಿಕತೆ ನಿವಾರಣೆ ಕುರಿತು ನ್ಯಾ| ಎನ್.ಕೆ. ಪಾಟೀಲರ ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು. ಸಂಪೂರ್ಣಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಜು. 1 ರಿಂದ ರಾಷ್ಟ್ರೀಯ ಪೌಷ್ಟಿಕಾಂಶ ಮಿಷನ್ ಜಾರಿಯಾಗುತ್ತಿದ್ದು, ಅಧಿಕಾರಿಗಳು ಸನ್ನದ್ಧರಾಗಿರಬೇಕು. ಅಪೌಷ್ಟಿಕತೆ ನಿವಾರಣೆಯಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪಾತ್ರ ಹೆಚ್ಚಾಗಿದೆ. ಆದರೆ ಈ ಎರಡು ಇಲಾಖೆಗಳು ಒಟ್ಟಾಗಿ ಸಮನ್ವಯತೆಯಿಂದ ಕೆಲಸ ನಿರ್ವಹಿಸದೆ ಇರುವುದು ದುರಾದೃಷ್ಟಕರ. ಪ್ರತಿ ಎರಡು
ತಿಂಗಳಿಗೊಮ್ಮೆ ವೈದ್ಯರು ಅಂಗನವಾಡಿಗೆ ತೆರಳಿ ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕೆಂದು ಆದೇಶವಿದ್ದರೂ ಪಾಲನೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು ಗಮನಹರಿಸಬೇಕು.
ವಿ.ಬಿ. ಪಾಟೀಲ, ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯ