Advertisement

ಜನ ಸಾಮಾನ್ಯರಿಗೆ ಸಮಸ್ಯೆಯಾಗದಂತೆ ಸಾರಿಗೆ ಸಂಪರ್ಕ ಕಲ್ಪಿಸಿ

11:53 PM Oct 17, 2019 | Sriram |

ಮಡಿಕೇರಿ: ಜನ ಸಾಮಾನ್ಯರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಾರಿಗೆ ಸಂಪರ್ಕ ಕಲ್ಪಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಸೂಚಿಸಿದ್ದಾರೆ.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸಮಗ್ರ ಸಾರಿಗೆ ಅಭಿವೃದ್ಧಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ ಮಾಲಿಕರು ಒಟ್ಟಾಗಿ ಸಮೀಕ್ಷೆ ನಡೆಸಿದ ವರದಿಯನ್ನು 15 ದಿನದೊಳಗೆ ನೀಡುವಂತೆ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶ ನೀಡಿದರು.

ಖಾಸಗಿ ಬಸ್‌ ಮಾಲಿಕರು ಕುಶಾಲನಗರ ಖಾಸಗಿ ಬಸ್‌ ನಿಲ್ದಾಣದಲ್ಲಿ ಯಾವುದೇ ಮೂಲಭೂತ ಸೌಲಭ್ಯವಿಲ್ಲದಿರುವ ಕುರಿತು ಸಭೆಯ ಗಮನಕ್ಕೆ ತಂದರು. ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ನಗರದ ಹಳೇ ಖಾಸಗಿ ಬಸ್‌ ನಿಲ್ದಾಣದಲ್ಲಿ ನಿಲುಗಡೆ ಮಾಡುವುದಕ್ಕೆ ಅಸಮಾದಾನ ವ್ಯಕ್ತಪಡಿಸಿದರು.

ಕುಶಾಲನಗರ ಖಾಸಗಿ ಬಸ್‌ ನಿಲ್ದಾಣದಲ್ಲಿ ಇರುವಂತಹ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಖಾಸಗಿ ಬಸ್‌ ಮಾಲಿಕರ ಸಂಘದ ಸದಸ್ಯರುು ಜಿಲ್ಲೆಯಲ್ಲಿ ಅವಶ್ಯವಿರುವ ಕಡೆಗಳಲ್ಲಿ ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದು, ಇವುಗಳ ರಹದಾರಿಯನ್ನು ಮುಂದುವರಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ.ಪಿ ಮಾತನಾಡಿದರು. ಸಾರಿಗೆ ಇಲಾಖೆಯ ಅಧೀಕ್ಷಕ ಶಿವಣ್ಣ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ಇಬ್ರಾಹಿಂ, ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕಿ ಗೀತಾ, ‌ ಕಾರ್ಯಪಾಲಕ ಎಂಜಿನಿಯರ್‌ ರೇವಣ್ಣ, ನಗರಾಭಿವೃದ್ಧಿ ಇಲಾಖೆಯ ಸಂಜೀವ್‌ಉಪಸ್ಥಿತರಿದ್ದರು.

ಸುರಕ್ಷತಾ ಸಮಿತಿ ಸಭೆ
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು.ರಾಜಾಸೀಟು ಬಳಿ ವಾಹನ ನಿಲುಗಡೆ ಕಾಮಗಾರಿ ಸಂಬಂಧಿಸಿದ ಮಾಹಿತಿಯನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು.ಜಿಲ್ಲೆಯಾದ್ಯಂತ ವಿಶೇಷವಾಗಿ ಗೋಣಿಕೊಪ್ಪ ಮತ್ತು ಕುಶಾಲನಗರ ಪಟ್ಟಣದಲ್ಲಿ ಏಕಮುಖ ಸಂಚಾರ ವ್ಯವಸ್ಥೆಗೆ ಹೊರಡಿಸಲಾದ ಅಧಿಸೂಚನೆ ಕುರಿತು ಚರ್ಚಿಸಲಾಯಿತು. ಮಡಿಕೇರಿಯ‌ ಖಾಸಗಿ ಬಸ್‌ ನಿಲ್ದಾಣದಲ್ಲಿ ಸ್ವತ್ಛತೆ, ಶೌಚಾಲಯ, ವಿದ್ಯುತ್‌ ಸಂಪರ್ಕ ಸೌಲಭ್ಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಸಂಬಂಧಪಟ್ಟ 9ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next