Advertisement

Ayodhya ಮಂದಿರ ಪ್ರತಿಷ್ಠಾಪನೆ; ಆಹ್ವಾನ ಬಂದರೆ ಪರಿಶೀಲಿಸುತ್ತೇನೆ: ಸಿದ್ದರಾಮಯ್ಯ

05:05 PM Dec 30, 2023 | Team Udayavani |

ಬೆಂಗಳೂರು: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಪ್ರತಿಷ್ಠಾಪನೆ ಸಮಾರಂಭಕ್ಕೆ ಇದುವರೆಗೆ ಆಮಂತ್ರಣ ಬಂದಿಲ್ಲ, ಆಮಂತ್ರಣ ಬಂದ ನಂತರ ಭಾಗವಹಿಸುವ ಕುರಿತು ಪರಿಗಣಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಹೇಳಿಕೆ ನೀಡಿದ್ದಾರೆ.

Advertisement

ಅಯೋಧ್ಯೆಯಲ್ಲಿ ರಾಮಮಂದಿರ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದೆಯೇ ಎಂದು ಪ್ರಶ್ನಿಸಿದ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ”ಇಂದಿನವರೆಗೂ ನನಗೆ ಆಹ್ವಾನ ಬಂದಿಲ್ಲ. ಆಹ್ವಾನ ಬಂದರೆ ನಾನು ಪರಿಶೀಲಿಸುತ್ತೇನೆ ಎಂದು ಹೇಳಿದರು.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇಶದ ಹಲವು ಗಣ್ಯರು ಮತ್ತು ರಾಜಕೀಯ ನಾಯಕರನ್ನು ಮಹಾ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಅವರು ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000 ಕ್ಕೂ ಹೆಚ್ಚು ಗಣ್ಯರು ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next