Advertisement

PM ಮೋದಿ ನೇತೃತ್ವದಲ್ಲೇ ರಾಮಮಂದಿರ ಪ್ರಾಣಪ್ರತಿಷ್ಠಾಪನೆ: ಜ.22ಕ್ಕೆ ರಾಮಮಂದಿರ ಉದ್ಘಾಟನೆ?

10:44 PM Jun 15, 2023 | Pranav MS |

ಅಯೋಧ್ಯೆ: ಮುಂದಿನ ವರ್ಷ ಜನವರಿಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲೇ ನಡೆಯಲಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌, ಜ.22ರಂದು ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳುವಂತೆ ಮೋದಿಗೆ ಆಹ್ವಾನ ನೀಡಿದೆ ಎಂಬ ವರದಿಗಳ ನಡುವೆಯೇ ಯೋಗಿ ಈ ಮಹತ್ವದ ಘೋಷಣೆ ಮಾಡಿದ್ದಾರೆ.

Advertisement

ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮಹಾಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಅವರು ಈ ಮಾಹಿತಿ ನೀಡಿದ್ದಾರೆ. ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದ ಮೋದಿ, ಈಗ ಉದ್ಘಾಟನೆಯಲ್ಲೂ ಮುಖ್ಯ ಪಾತ್ರವಹಿಸಲಿದ್ದಾರೆ ಎನ್ನುವುದು ಖಚಿತವಾಗಿದೆ. ಆದರೆ ಪ್ರಧಾನಿ ಕಾರ್ಯಾಲಯ ಇನ್ನೂ ಅಧಿಕೃತವಾಗಿ ಆಹ್ವಾನಕ್ಕೆ ಪ್ರತಿಕ್ರಿಯೆ ನೀಡಿಲ್ಲ.

ಯೋಗಿ ಹೇಳಿದ್ದೇನು?: 500 ವರ್ಷಗಳ ನಂತರ ರಾಮಲಲ್ಲಾ ತನ್ನ ಮಂದಿರಕ್ಕೆ ವಾಪಸ್‌ ಮರಳುತ್ತಿದ್ದಾನೆ. ಇದು ಇಡೀ ಜಗತ್ತನ್ನೇ ಆಕರ್ಷಿಸುತ್ತಿದೆ. ಮಂದಿರ ಉದ್ಘಾಟನೆಗೂ ಮುನ್ನ ಅಯೋಧ್ಯೆಯಲ್ಲಿ 21 ಲಕ್ಷ ದೀಪಗಳನ್ನು ಬೆಳಗಲಾಗುತ್ತದೆ. ಅಯೋಧ್ಯೆ ಈಗ ಕೇವಲ ರಾಮರಾಜ್ಯವಾಗುತ್ತಿಲ್ಲ. ಬದಲಿಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಇಡೀ ದೇಶವನ್ನೇ ಪ್ರಭಾವಿಸುತ್ತಿದೆ. ಮತ್ತೂಮ್ಮೆ ಅಯೋಧ್ಯೆ ಮರಳಿ ತ್ರೇತಾಯುಗವನ್ನು ನೆನಪಿಸುತ್ತಿದೆ. ಅಯೋಧ್ಯೆ ಶಾಸಕ ಮತ್ತು ಪ್ರಜೆಗಳ ನಡುವಿನ ಸಂಬಂಧ ಹೇಗಿರಬೇಕೆಂದು ನಮಗೆ ತಿಳಿಸುತ್ತದೆ ಎಂದು ಯೋಗಿ ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next