Advertisement

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

07:45 AM Sep 20, 2024 | Team Udayavani |

ಬೆಂಗಳೂರು: ಸಂತ್ರಸ್ತೆಯ ಹೇಳಿಕೆಯಲ್ಲಿ ಭಿನ್ನತೆ ಇದೆ. ಎಫ್ಎಸ್‌ಎಲ್‌ ವರದಿಯಲ್ಲಿ ಸ್ಪಷ್ಟತೆ ಇಲ್ಲ, ಅತ್ಯಾಚಾರ ಆರೋಪ ಸತ್ಯಕ್ಕೆ ದೂರವಾಗಿದ್ದು, 4 ವರ್ಷಗಳ ಬಳಿಕ ದೂರು ನೀಡಲಾಗಿದೆ. ಇದೊಂದು ಒಪ್ಪಿತ ಲೈಂಗಿಕ ಕ್ರಿಯೆ. ಇದು ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪರ ವಕೀಲರು ಹೈಕೋರ್ಟ್‌ ಮುಂದೆ ಮಂಡಿಸಿದ ವಾದ.

Advertisement

ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿತು.ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜಾಮೀನು ಹಾಗೂ ಹಾಸನ ಜಿ.ಪಂ. ಮಾಜಿ ಸದಸ್ಯೆಯ ಮೇಲೆ ಅತ್ಯಾಚಾರ ಆರೋಪ ಮತ್ತು ಅಶ್ಲೀಲ ವವೀಡಿಯೊಗಳ ಹಂಚಿಕೆಯ ಸಂಬಂಧ ದಾಖಲಾಗಿರುವ 2 ಪ್ರತ್ಯೇಕ ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಈ ವೇಳೆ ಪ್ರಜ್ವಲ್‌ ರೇವಣ್ಣ ಪರ ಸುದೀರ್ಘ‌ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ, ಇಡೀ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದರೆ ಸಂತ್ರಸ್ತೆ ಮಹಿಳೆ ಮೊದಲು ಅರ್ಜಿದಾರರ ತಂದೆ (ಎಚ್‌.ಡಿ. ರೇವಣ್ಣ) ವಿರುದ್ಧ ಅತ್ಯಾಚಾರ ಆರೋಪದಲ್ಲಿ ದೂರು ದಾಖಲಿಸಿದ್ದರು. ತನಿಖಾಧಿಕಾರಿಗಳ ಮುಂದೆ ಮುಂದುವರಿದು ಹೇಳಿಕೆ ನೀಡುವ ಸಂದರ್ಭದಲ್ಲಿ ಅರ್ಜಿದಾರರ (ಪ್ರಜ್ವಲ್‌ ರೇವಣ್ಣ) ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾರೆ. ಅಷ್ಟಕ್ಕೂ 4 ವರ್ಷಗಳ ಬಳಿಕ ಅಂದರೆ 2020ರಲ್ಲಿ ನಡೆದಿರುವ ಘಟನೆ ಸಂಬಂಧಿಸಿದಂತೆ 2024ರಲ್ಲಿ ದೂರು ನೀಡಲಾಗಿದೆ. ದೂರು ನೀಡಲು ಇಷ್ಟೊಂದು ವಿಳಂಬ ಏಕೆ ಅನ್ನುವುದು ಸ್ಪಷ್ಟವಾಗಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next