ದಿನವೂ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ವ್ಯಾಪಾರ, ವಹಿವಾಟು ನಡೆಸಲು ಅವಕಾಶ ನೀಡಿದೆ. ಜಿಲ್ಲಾಧಿಕಾರಿ ಆರ್.ಗಿರೀಶ್ ಹಾಗೂ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಆರ್.ಶ್ರೀನಿವಾಸ ಗೌಡ ಅವರು ಪ್ರತ್ಯೇಕವಾಗಿ ಈ ಬಗ್ಗೆ ಮಾಹಿತಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳಿಗೆ ಒತ್ತು ನೀಡಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವ್ಯವಹರಿಸಬೇಕು ಎಂದು ಸೂಚನೆ ನೀಡಿದ್ದಾರೆ.
Advertisement
ಆರ್ಥಿಕತೆಗೆ ಒತ್ತು ನೀಡುವ ಉದ್ದೇಶ: ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿ, ಮೇ 17ರ ವರೆಗೆ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ವಾರದಲ್ಲಿ ಮೂರು ದಿನ ಮಾತ್ರ ಹಾಸನ ಜಿಲ್ಲೆಯಲ್ಲಿ ಮೂರು ದಿನಗಳು ಮಾತ್ರ ವ್ಯಾಪಾರ, ವಹಿವಾಟಿಗೆ ಅನುಮತಿ ನೀಡಲಾಗಿತ್ತು. ಆದರೆ ಹಾಸನ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಿರುವುದರಿಂದ ಹಸಿರು ಪಟ್ಟಿಯಲ್ಲಿದೆ. ಹಾಗಾಗಿ ಆರ್ಥಿಕ ಚಟುವಟಿಕೆಗೆ ಒತ್ತು ನೀಡುವ ಉದ್ದೇಶದಿಂದ ಈಗ ವಾರದ ಎಲ್ಲ 7 ದಿನಗಳೂ ಸರ್ಕಾರದ ಅನುಮೋದಿತ ವ್ಯವಹಾರಗಳನ್ನು ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದರು.
ಅನಿವಾರ್ಯವಾಗಿ ಹೋಗಬೇಕಾದವರು ಸಂಬಂಧಪಟ್ಟ ಪೊಲೀಸ್ ಠಾಣೆ ಅಥವಾ ಎಸ್ಪಿ ಕಚೇರಿಯಲ್ಲಿ ಪಾಸ್ ಪಡೆಯುವುದು ಕಡ್ಡಾಯ. ಕೆಎಸ್‌ಪಿ ಆ್ಯಪ್ ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದು ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಆರ್. ಶ್ರೀನಿವಾಸಗೌಡ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಲಾಕ್‌ಡೌನ್ ಬಹುತೇಕ ಯಶಸ್ವಿಯಾಗಿದೆ. ಇದುವರೆಗೂ ಹಾಸನ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ. ಹಾಗಾಗಿ ಹಸಿರು ವಲಯದಲ್ಲಿ ಇಷ್ಟು ದಿನ ಸ್ಥಾನಪಡೆದುಕೊಂಡು ಬಂದಿರುವ ಹಾಸನ ಜಿಲ್ಲೆ ಯಲ್ಲಿ ಮುಂದೆಯೂ ಕೋವಿಡ್ ಪ್ರಕರಣಗಳು ದಾಖಲಾಗದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು. ಸಾರ್ವಜನಿಕರು ಹೊರ ಬರದೆ ಮನೆಯಲ್ಲಿಯೇ ಇದ್ದು ಸಹಕರಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಹೊರಬರಬೇಕಾದರೂ ಮಾಸ್ಕ್ ಧಾರಣೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಇಷ್ಟು ದಿವಸ ಹಸಿರು ಜಿಲ್ಲೆಯಾಗಿರುವಂತೆ ಮುಂದೆಯೂ ಕೂಡ ಪ್ರಕರಣ ದಾಖಲಾಗದಂತೆ ಸಾರ್ವಜನಿಕರು ಸಹಕರಿಸಬೇಕು ಎಂದರು.
Related Articles
ವ್ಯಾಪಾರ, ವಹಿವಾಟು ಸಂದರ್ಭದಲ್ಲಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧಾರಣೆ ಮತ್ತು ಸ್ಯಾನಿಟೈಸರ್ ಬಳಕೆ ಕಡ್ಡಾಯ. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ನಿಯಮ ಉಲ್ಲಂಘನೆ ಮಾಡಿದರೆ ಮಾಡಿದರೆ ದಂಡ ವಿಧಿಸುವುದಾಗಿ ಎಸ್ಪಿ ಶ್ರೀನಿವಾಸಗೌಡ ಎಚ್ಚರಿಸಿದರು.
Advertisement