ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ತಾತ್ಕಾಲಿಕವಾಗಿ 27 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಷರತ್ತಿನ ಅನುಮತಿ ನೀಡಿದ್ದು, ಇವರ ಮಾಸಿಕ ಗೌರವ ಸಂಭಾವನೆ 10 ಸಾವಿರ ರೂ. ಇರಲಿದೆ.
ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿ ರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿ ಮಾಡು
ವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ತಾತ್ಕಾಲಿಕವಾಗಿ 27 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸಂಬಂಧ ಪಟ್ಟ ಜಿಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ.
ಈ ನೇಮಕಾತಿಯು ಸರಕಾರ ಈಗಾಗಲೇ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿರುವ ಒಟ್ಟು 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ಹುದ್ದೆಗಳ ಅಡಿಯಲ್ಲಿ ಪ್ರಸ್ತುತ ನೇಮಕಾತಿ ಎಲ್ಲ ಅಂತಿಮ ಪ್ರಕ್ರಿಯೆಗಳು ಮುಕ್ತಾಯಗೊಂಡು 2023-24ನೇ ಸಾಲಿನಲ್ಲಿ ಹಾಜರಾಗುವ ಒಟ್ಟು ಶಿಕ್ಷಕರ ಸಂಖ್ಯೆಗೆ ಅನುಗುಣವಾಗಿ ಕಡಿತಗೊಳಿಸುವ ಷರತ್ತಿ ಗೊಳಪಟ್ಟು ಅನುಮತಿ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.