ನವದೆಹಲಿ:ದೇಶದಲ್ಲಿ ಕೋವಿಡ್ 19 ಎರಡನೇ ಅಲೆಯನ್ನು ತಡೆಗಟ್ಟಲು ಲಾಕ್ ಡೌನ್ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿದೆ.
ಇದನ್ನೂ ಓದಿ:ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 12 ಮಂದಿ ಸೇರಿ ಒಟ್ಟು 22 ಮಂದಿ ಸಾವು
ಭಾರತದಲ್ಲಿ ಕೋವಿಡ್ 19 ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕೋವಿಡ್ ರೋಗಿಗಳನ್ನು ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳಲು ಅಥವಾ ತುರ್ತು ವೈದ್ಯಕೀಯ ನೆರವು ನೀಡಲು ನಿರಾಕರಿಸಬಾರದು ಎಂದು ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಕೋವಿಡ್ 19 ಸೋಂಕಿತ ರೋಗಿಗಳ ದಾಖಲಾತಿ ಕುರಿತಂತೆ ಎರಡು ವಾರಗಳಲ್ಲಿ ರಾಷ್ಟ್ರೀಯ ನೀತಿಯನ್ನು ರೂಪಿಸುವಂತೆ ಸುಪ್ರೀಂಕೋರ್ಟ್ ನ ಜಸ್ಟೀಸ್ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಕೇಂದ್ರ ಸರ್ಕಾರ ರೂಪಿಸುವ ನೀತಿಯನ್ನು ಎಲ್ಲಾ ರಾಜ್ಯ ಸರ್ಕಾರಗಳು ಅನುಸರಿಸಬೇಕು, ಅಲ್ಲದೇ ಗುರುತ ಪತ್ರ, ಸ್ಥಳೀಯ ನಿವಾಸಿ ದಾಖಲೆಯ ಇಲ್ಲದ ಕಾರಣ ನೀಡಿ ಯಾವುದೇ ರೋಗಿಗಳನ್ನು ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳಲು ನಿರಾಕರಿಸಬಾರದು ಎಂದು ಎಚ್ಚರಿಕೆ ನೀಡಿದೆ.