Advertisement

ದೇಶದ ಸುರಕ್ಷತೆ-ವಿಕಾಸ ಪರಿಗಣಿಸಿ ಮತ ನೀಡಿ

11:27 AM Apr 21, 2019 | pallavi |

ಹುಬ್ಬಳ್ಳಿ: ದೇಶದಲ್ಲಿ ಕಳೆದ 5 ವರ್ಷಗಳಲ್ಲಿ ರಾಷ್ಟ್ರೀಯ ಸುರಕ್ಷತೆ, ದೇಶದ ವಿಕಾಸ ಹಾಗೂ ಜನರ ಕಲ್ಯಾಣವನ್ನು ಪರಿಗಣಿಸಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಹೇಳಿದರು.

Advertisement

ಗೋಕುಲ ಗಾರ್ಡನ್‌ನಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಬಿಜೆಪಿ ಮಹಾನಗರ ಜಿಲ್ಲಾ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 2008ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ 166 ಜನರು ಜೀವ ಕಳೆದುಕೊಂಡರು. ಆದರೆ ಆಗ ಕೇಂದ್ರ ಸರಕಾರ ಪಾಕಿಸ್ತಾನದ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಲಿಲ್ಲ. ಆದರೆ ಪುಲ್ವಾಮಾದಲ್ಲಿ ಉಗ್ರರು ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದಾಗ ಸರ್ಜಿಕಲ್ ಸ್ಟ್ರೆ ೖಕ್‌ ಮೂಲಕ ಪ್ರತ್ಯುತ್ತರ ನೀಡಿದ್ದು ಪ್ರಧಾನಿ ಮೋದಿ. ಅಂತಾರಾಷ್ಟ್ರೀಯ ಸಮುದಾಯ ಪಾಕಿಸ್ತಾನದ ಮೇಲೆ ಒತ್ತಡ ಹೇರುವಂತೆ ಮಾಡಲಾಯಿತು ಎಂದರು.

ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ನಮ್ಮ ಸೈನಿಕರು ದಾಳಿ ನಡೆಸಿದ್ದನ್ನು ಜಗತ್ತಿನ ಬಹುತೇಕ ರಾಷ್ಟ್ರಗಳು ಶ್ಲಾಘಿಸಿವೆ. ಮೋದಿಯವರ ಜನಪರ ಯೋಜನೆಗಳನ್ನು ತಿಳಿದುಕೊಂಡ ಹಲವು ಇಸ್ಲಾಂ ದೇಶಗಳು ಪ್ರಧಾನಿ ಮೋದಿ ಅವರಿಗೆ ಉನ್ನತ ನಾಗರಿಕ ಸನ್ಮಾನ ಮಾಡಿವೆ ಎಂದು ಹೇಳಿದರು.

ಪಾಕಿಸ್ತಾನದ ವಿರೋಧದ ಹೊರತಾಗಿಯೂ ಇಸ್ಲಾಮಿಕ್‌ ರಾಷ್ಟ್ರಗಳ ಸಂಘಟನೆ (ಐಒಸಿ) ಶೃಂಗಸಭೆಯಲ್ಲಿ ಭಾರತ ಪಾಲ್ಗೊಳ್ಳಲು ಅವಕಾಶ ನೀಡಿತು. ಪಾಕಿಸ್ತಾನವೇ ಸಭೆಯಲ್ಲಿ ಪಾಲ್ಗೊಳ್ಳದೆ ಗೈರು ಉಳಿಯುವ ಸ್ಥಿತಿ ಬಂದೊದಗಿತು. ಭಾರತದ ಬಗ್ಗೆ ಇಸ್ಲಾಂ ದೇಶಗಳ ಮನೋಭಾವ ಬಿಂಬಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಹಿಂದುಳಿದ ಜಾತಿ, ಹಿಂದುಳಿದ ಜನಾಂಗದ ಮೀಸಲಾತಿಗೆ ಧಕ್ಕೆಯಾಗದಂತೆ ಸವರ್ಣೀಯರಲ್ಲಿನ ಬಡವರಿಗೆ ಶೇ.10 ಮೀಸಲಾತಿ ನೀಡಲಾಗಿದೆ. ಹಜ್‌ ಯಾತ್ರೆಗೆ ತೆರಳುವವರಿಗೆ ಸಹಾಯ ಧನವನ್ನು 2 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಮುದ್ರಾ ಯೋಜನೆಯಲ್ಲಿ 17 ಕೋಟಿ 16 ಲಕ್ಷ ಜನರಿಗೆ ಸಾಲ ಸೌಲಭ್ಯ ನೀಡಿ ಸ್ವ ಉದ್ಯೋಗ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.

Advertisement

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ ಜೋಶಿ ಮತ್ತೂಮ್ಮೆ ಸಂಸದರಾಗಬೇಕು ಹಾಗೂ ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು. ಪ್ರಹ್ಲಾದ ಜೋಶಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕಾರ್ಯ ಕೈಗೊಂಡಿದ್ದಾರೆ. ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತಾರಾಷೀr್ರಯ ವಿಮಾನ ನಿಲ್ದಾಣವನ್ನಾಗಿಸಲು ಪ್ರಯತ್ನಿಸಿದ್ದಾರೆ. ಹಲವು ಹೊಸ ರೈಲುಗಳ ಸೇವೆ ಆರಂಭಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು.

ಅಭ್ಯರ್ಥಿ ಪ್ರಹ್ಲಾದ ಜೋಶಿ ಪ್ರಾಸ್ತಾವಿಕ ಮಾತನಾಡಿ, ರಾಜ್ಯದ ಸಂಸದರಲ್ಲಿ ಕ್ರಿಯಾಶೀಲವಾಗಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಂಸದರಲ್ಲಿ ನಾನು ಅಗ್ರ ಸ್ಥಾನದಲ್ಲಿರುವುದಕ್ಕೆ ಸುಷ್ಮಾ ಸ್ವರಾಜ್‌ ಅವರ ಪ್ರೋತ್ಸಾಹವೇ ಕಾರಣ. ಅವರನ್ನು ನೋಡಿ ನಾನು ಸಂಸತ್‌ನಲ್ಲಿ ವಿಷಯ ಚರ್ಚೆ ಮಾಡುವುದನ್ನು ಕಲಿತುಕೊಂಡಿದ್ದೇನೆ. ಅವರಿಗೆ ನಾನು ಋಣಿಯಾಗಿದ್ದೇನೆ ಎಂದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ನಾಗೇಶ ಕಲಬುರ್ಗಿ ಇದ್ದರು.

ಸುಷ್ಮಾಗೆ ಅಭಿನಂದನೆ

ಪಾಕಿಸ್ತಾನದ ಯುವತಿಯನ್ನು ಮದುವೆಯಾಗಿ, ಪತ್ನಿಯನ್ನು ಭಾರತಕ್ಕೆ ಕರೆಸಿಕೊಳ್ಳಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರ ನೆರವು ಪಡೆದ ಹುಬ್ಬಳ್ಳಿಯವರಾದ ಡೇನಿಯಲ್ ಕಾರ್ಯಕ್ರಮದ ನಂತರ ಸಚಿವೆಗೆ ಹೂಗುಚ್ಛ ನೀಡಿ ಕೃತಜ್ಞತೆ ಸಲ್ಲಿಸಿದರು.
Advertisement

Udayavani is now on Telegram. Click here to join our channel and stay updated with the latest news.

Next