ಬೆಂಗಳೂರು: ಕೋವಿಡ್ 19 ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ದೇಶಾದ್ಯಂತ 21 ದಿನಗಳ ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ದಿನಗೂಲಿ ಕಾಮಿ9ಕರು, ವಲಸೆ ಕಾರ್ಮಿಕರು, ಬಡ ನಿರ್ಗತಿಕರ ಆಹಾರ ಭದ್ರತೆಗೆ ಸಂಬಂಧಿಸಿ ಹೈಕೋರ್ಟ್ ಹಾಗೂ ಕಾನೂನು ಸೇವಾ ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿರುವ ಮನವಿಗಳನ್ನು ಪರಿಗಣಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಈ ಸಂಬಂಧ ಪಿಯುಸಿಎಲ್ ಅಧ್ಯಕ್ಷರು ಮುಖ್ಯ ನ್ಯಾಯಮೂತಿ9ಯವರಿಗೆ ಮಾಡಿರುವ ಇ ಮೇಲ್, ಎಐಟಿಯುಸಿ ಸೇರಿದಂತೆ ವಿವಿಧ ಸಂಘಟನೆಗಳು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಿಗೆ ಬರೆದ ಪತ್ರಗಳು, ಬಿಬಿಎಂಪಿ ಪೌರಕಾರ್ಮಿಕರ ಸಂಘ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಬರೆದ ಪತ್ರಗಳನ್ನು ಆಧರಿಸಿ ತುರ್ತು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ಹೈಕೋರ್ಟ್ ಹಾಗೂ ಕಾನೂನು ಸೇವಾ ಪ್ರಾಧಿಕಾರಕ್ಕೆ ಬರೆಯಲಾಗಿರುವ ಈ ಮೂರು ಪತ್ರಗಳನ್ನು ಸೇರಿದಂತೆ ಇ ಮೇಲ್ ಮೂಲಕ ಸಂಧ್ಯಾ ಯು. ಪ್ರಭು ಆವರು ಸಲ್ಲಿಸಿರುವ ಅಜಿ9ಯನ್ನು ಅಡ್ವೋಕೇಟ್ ಜನರಲ್ ಹಾಗೂ ರಾಜ್ಯ ಸಕ9ರದ ಮುಖ್ಯ ಕಾರ್ಯದರ್ಶಿಗೆ ಇ ಮೇಲ್ ಅಥವಾ ವಾಟ್ಸಪ್ ಮೂಲಕ ರವಾನಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ಗೆ ನ್ಯಾಯಪೀಠ ನಿರ್ದೇಶನ ನೀಡಿತು.
ಅಲ್ಲದೇ ಈ ಮೂರು ಪತ್ರಗಳನ್ನು ಕೋವಿಡ್ 19 ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವಂತೆ ಸಲ್ಲಿಸಲಾಗಿರುವ ಪಿಐಎಲ್ ಗೆ ಪೂರಕವಾಗಿ ಪರಿಗಣಿಸಲಾಗುವುದು ಎಂದು ನ್ಯಾಯಪೀಠ ಹೇಳಿದೆ.
ಇದೇ ವೇಳೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಾ.30ರ ಬೆಳಿಗ್ಗೆ 11 ಗಂಟೆಗೆ ವಿಚಾರಣೆ ನಡೆಸುವುದಾಗಿ ಹೇಳಿರುವ ನ್ಯಾಯಪೀಠ, ಸಂದರ್ಭ ಒದಗಿ ಬಂದರೆ, ಕೈದಿಗಳ ಕುರಿತು ಸುಪ್ರೀಕೋರ್ಟ್ ನೀಡಿರುವ ನಿರ್ದೇಶನಗಳನ್ನು ಪಾಲಿಸಿರುವ ವಿಚಾರದ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ನ್ಯಾಯಪೀಠ ಹೇಳಿದೆ.