Advertisement

ಸರ್ಕಾರಕ್ಕೆ ಸಮಾಧಾನಕರ ನೂರು ದಿನ​​​​​​​

06:20 AM Aug 30, 2018 | Team Udayavani |

ಬೆಂಗಳೂರು: “ರಾಜ್ಯ ಸರ್ಕಾರ ನೂರು ದಿನ ಯಶಸ್ವಿಯಾಗಿ ಪೂರೈಸಿದ್ದು, ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಐದು ವರ್ಷ ಯಶಸ್ವಿಯಾಗಿ ಪೂರೈಸಲಿದೆ’ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.

Advertisement

ರಾಜ್ಯ ಸರ್ಕಾರದ ಸಾಧನೆ ತಿಳಿಸಲು ವಿಶೇಷ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಮ್ಮಿಶ್ರ ಸರ್ಕಾರ ಬಿದ್ದು ಹೋಗುತ್ತದೆ ಎಂದು ಪ್ರತಿಪಕ್ಷದವರು ಮತ್ತು ಕೆಲವರು ಪಂಚಾಂಗ ನೋಡಿ ಆರೋಪ ಮಾಡುತ್ತಿದ್ದಾರೆ. ಆದರೆ, ನಮ್ಮ ಸರ್ಕಾರದಲ್ಲಿ ಸಣ್ಣಪುಟ್ಟ ಗೊಂದಲಗಳಿದ್ದರೂ ಅದನ್ನು ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳುತ್ತೇವೆ. ಐದು
ವರ್ಷ ಯಶಸ್ವಿಯಾಗಿ ನಡೆಸುತ್ತೇವೆ’ ಎಂದು ಭರವಸೆ ನೀಡಿದರು. 

ಬಿಜೆಪಿಯವರು ಅವರ ಸಂಪರ್ಕದಲ್ಲಿ ಕಾಂಗ್ರೆಸ್‌ ಶಾಸಕರು ಇದ್ದಾರೆ ಎಂದು ಹೇಳುತ್ತಾರೆ. ಅವರ ಪಕ್ಷದ ಎಷ್ಟು ಜನ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಶೀಘ್ರದಲ್ಲೇ ಬಹಿರಂಗ ಪಡೆಸುತ್ತೇವೆ ಎಂದರು. 

ಸ್ಥಳೀಯ ಸಂಸ್ಥೆ ಚುನಾವಣೆ ಮುಗಿದ ನಂತರ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಮಾಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ರಾಹುಲ್‌ ಗಾಂಧಿ ಗಮನಕ್ಕೆ ತರಲಾಗುವುದು ಎಂದರು.

ನೂರು ದಿನದಲ್ಲಿ ಸರ್ಕಾರ ಹತ್ತಕ್ಕೆ ಹತ್ತು ಅಂಕ ಪಡೆದಿದೆ. ರೈತರನ್ನು ಋಣ ಮುಕ್ತರನ್ನಾಗಿಸಲು ಕಾಯ್ದೆ ಜಾರಿಗೆ
ತರಲಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.

Advertisement

ವೈಯಕ್ತಿಕ ವಿಚಾರ
ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎನ್ನುವುದು ಅವರ ವೈಯಕ್ತಿಕ ವಿಚಾರ. ಅದಕ್ಕೆ ಅವರೇ ಉತ್ತರ ನೀಡಬೇಕು. ಸಿದ್ದರಾಮಯ್ಯ ಹಾಗೂ ಅನೇಕ ಶಾಸಕರು ವಿದೇಶ ಪ್ರವಾಸ ತೆರಳುವುದರಲ್ಲಿ ತಪ್ಪಿಲ್ಲ. ಇದರಿಂದ ಸರ್ಕಾರಕ್ಕೆ ತೊಂದರೆಯಿಲ್ಲ. ನಮ್ಮಲ್ಲಿ ಗೊಂದಲಗಳಿಲ್ಲ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next