Advertisement

ಖಾಸಗಿ ಆಂಗ್ಲಮಾಧ್ಯಮ ಶಾಲೆಗಳ ಒಕ್ಕೂಟದ ಸಭೆ:ಒಕ್ಕೂಟ ಬಲಿಷ್ಠಗೊಳಿಸುವ ಅನಿವಾರ್ಯ- ಸೀತಾರಾಮ ರೈ

01:07 AM Oct 17, 2023 | Team Udayavani |

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಆಂಗ್ಲಮಾಧ್ಯಮ ಶಾಲೆಗಳು ಬಹಳಷ್ಟು ಸವಾಲು ಎದುರಿಸುತ್ತಿದ್ದು ಆ ನಿಟ್ಟಿನಲ್ಲಿ ಆಡಳಿತ ಮಂಡಳಿ ಒಕ್ಕೂಟವನ್ನು ಬಲಿಷ್ಠಗೊಳಿಸುವ ಅನಿವಾರ್ಯ ಇದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಗೌರವಾಧ್ಯಕ್ಷ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಚೇರ್‌ಮನ್‌ ಕೆ. ಸೀತಾರಾಮ ರೈ ಸವಣೂರು ಅಭಿಪ್ರಾಯಪಟ್ಟರು.

Advertisement

ಮಂಗಳೂರಿನ ಬಲ್ಮಠದ ಕುಡ್ಲ ಪೆವಿಲಿಯನ್‌ನಲ್ಲಿ ಸೋಮವಾರ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಜಾರಿಯಾಗುತ್ತಿರುವ ವಿವಿಧ ವ್ಯವಸ್ಥೆ, ಕಾನೂನುಗಳಿಂದಾಗಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ಬಹಳಷ್ಟು ಸಮಸ್ಯೆಗಳನ್ನು ಹೊಂದಿದ್ದರೂ ಅದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಒಕ್ಕೂಟ ಸ್ಪಂದಿಸುತ್ತಿದೆ. ಹಾಗೆಯೇ ಮುಂದಿನ ದಿನಗಳಲ್ಲೂ ನಾವೆಲ್ಲರೂ ಸಂಘಟಿತರಾಗಿ ಕೆಲಸ ಮಾಡಬೇಕಿದ್ದು ಆ ಮೂಲಕ ಒಕ್ಕೂಟವನ್ನು ಬಲಿಷ್ಠಗೊಳಿಸುವ ಅನಿವಾರ್ಯತೆ ಎದುರಾಗಿದ್ದು ಎಲ್ಲ ಖಾಸಗಿ ಆಂಗ್ಲಮಾಧ್ಯಮ ಶಾಲೆಗಳ ಆಡಳಿತ ಮಂಡಳಿ ಸಹಕರಿಸಬೇಕಿದೆ ಎಂದರು.

ಜೋಕಟ್ಟೆ ಅಂಜುಮಾನ್‌ ಆಂಗ್ಲಮಾಧ್ಯಮ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕ ಮೂಸಪ್ಪ ಬಿ. ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಸಾಂದೀಪನಿ ವಿದ್ಯಾಮಂದಿರದ ಸಂಚಾಲಕ ಎಚ್‌. ಭಾಸ್ಕರ ಆಚಾರ್‌ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಭಯ ಜಿಲ್ಲಾ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಸಂಚಾಲಕರು ಅಭಿಪ್ರಾಯ ವ್ಯಕ್ತಪಡಿಸಿದರು.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ, ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯ ಆಡಳಿತ ನಿರ್ದೇಶಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು. ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಜಯಸೂರ್ಯ ರೈ ವಂದಿಸಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next