ಬೆಂಗಳೂರು: ನಗರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು 6 ವರ್ಷದಿಂದ 5 ವರ್ಷಕ್ಕೆ ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ.
ನಗರದ ಪೊಲೀಸ್ ಆಯುಕ್ತರ ಠಾಣಾ ವ್ಯಾಪ್ತಿಯಲ್ಲಿ ಕಾನ್‌ಸ್ಟೆàಬಲ್‌ಗಳಿಗೆ ಈ ನೂತನ ಆದೇಶ ಅನ್ವಯವಾಗಲಿದೆ. ಒಂದೇ ಠಾಣೆಯಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಕಾನ್‌ಸ್ಟೇಬಲ್ ಗಳನ್ನು ಮುಂದಿನ ದಿನಗಳಲ್ಲಿ ವರ್ಗಾವಣೆಯಾಗಬಹುದು.
ಈ ಹಿಂದೆ ಅಣ್ಣಾಮಲೈ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿದ್ದ ವೇಳೆ ಕುಮಾರಸ್ವಾಮಿ ಬಡಾವಣೆ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದರು. ಅಲ್ಲದೆ, ಪೊಲೀಸ್ ವಿಭಾಗದಲ್ಲಿ ವರ್ಗಾವಣೆಗೆ ಸರ್ಕಸ್ ನಡೆಯುತ್ತಿರುತ್ತದೆ. ಈ ಮೂಲಕ ವರ್ಗಾವಣೆ ಬಯಸುವ ಸಿಬ್ಬಂದಿಗೆ ಅನುಕೂಲವಾಗಲಿದೆ.