Advertisement

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

01:06 PM May 11, 2024 | Team Udayavani |

ಚಿಕ್ಕಬಳ್ಳಾಪುರ: ನಗರದ ಹೊರ ವಲಯದ ಅಣಕನೂರು ಬಳಿ ಇರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಇಬ್ಬರು ಪೊಲೀಸ್ ಪೇದೆಗಳು ತಮ್ಮ ಕುಟುಂಬ ಸಮೇತ ಧರಣಿ ನಡೆಸುತ್ತಿದ್ದಾರೆ.

Advertisement

ತಮ್ಮನ್ನು ಪೊಲೀಸ್ ವರಿಷ್ಟಾಧಿಕಾರಿಗಳು ನಮ್ಮದ್ದಲ್ಲದ ತಪ್ಪಿಗೆ ನಮ್ಮನ್ನು ಸೇವೆಯಿಂದ ಅಮಾನತ್ತು ಮಾಡಿದ್ದಾರೆ, ನಮಗೆ ಪೊಲೀಸ್ ವರಿಷ್ಟಾಧಿಕಾರಿಗಳಿಂದ ಕಿರುಕುಳ ಆನ್ಯಾಯ ಆಗಿದೆ ಎಂದು ಆರೋಪಿಸಿ ಅಂಬೇಡ್ಕರ್ ಭಾವಚಿತ್ರ ಹಿಡಿದು ಧರಣಿ ನಡೆಸುತ್ತಿದ್ದಾರೆ.

ಅಮಾನತ್ತು ಮಾಡಿ ಆರು ತಿಂಗಳು ಕಳೆದಿದೆ. ಅಮಾನತ್ತು ಆದೇಶ ಹಿಂಪಡೆದಿಲ್ಲ. ನಮಗೆ ನ್ಯಾಯ ಒದಗಿಸಬೇಕು. ನಮ್ಮ ಮೇಲಿನ ಆರೋಪ ಬಗ್ಗೆ‌ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ಪೊಲೀಸ್ ಕಾನ್ಸ್ ಟೇಬಲ್ ಗಳು ಧರಣಿ ಕೂತಿದ್ದಾರೆ.

ತಮ್ಮ ವಿರುದ್ದ ಪೊಲೀಸ್ ಪೇದೆಗಳು ಧರಣಿ ನಡೆಸುತ್ತಿರುವ ಕುರಿತು ಉದಯವಾಣಿ ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಿ.ಎಲ್.ನಾಗೇಶ್, ಧರಣಿ ಮಾಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು. ಏನಾದರೂ ಅವರ ಅಹವಾಲು ಇದ್ದರೆ ಇಲಾಖೆಗೆ ಸಲ್ಲಿಸಲಿ. ಅಥವ ನನ್ನ ಮೇಲಿನ ಅಧಿಕಾರಿಗಳಿಗೆ ಕೊಡಲಿ ನಿಯಮನುಸಾರ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ ಎಂದರು. ಅದು ಬಿಟ್ಟು ಈ ರೀತಿ ಪ್ರತಿಭಟನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Hanuman Temple: ಚುನಾವಣಾ ಪ್ರಚಾರಕ್ಕೂ ಮೊದಲು ದೇವರ ದರ್ಶನ ಪಡೆದ ಕೇಜ್ರಿವಾಲ್

Advertisement
Advertisement

Udayavani is now on Telegram. Click here to join our channel and stay updated with the latest news.

Next